×
Ad

ಅದಮಾರು: ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Update: 2017-03-01 21:47 IST

ಪಡುಬಿದ್ರೆ, ಮಾ.1: ಅದಮಾರಿನ ಪೂರ್ಣಪ್ರಜ್ಞ ಪದವಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾ ರಂಭ ಇತ್ತೀಚೆಗೆ ಜರಗಿತು.

ಅದಮಾರು ಮಠ ಎಜ್ಯುಕೇಷನ್ ಕೌನ್ಸಿಲ್‌ನ ಅಧ್ಯಕ್ಷ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಕಾಪು ಶಾಸಕ ವಿನಯ್ ಕುಮಾರ್ ಸೊರಕೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ಗಣ ನಾಥ ಎಕ್ಕಾರು, ಸಂಧ್ಯಾ ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಪ್ರದೀಪ್ ಕುಮಾರ್ ಮಾತನಾಡಿದರು.

ಉಡುಪಿ ಲಯನ್ಸ್ ವಲಯಾಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ಲಯನ್ ಜಿಲ್ಲಾ ಸಂಪುಟ ಕಾರ್ಯದರ್ಶಿ ಸುನೀಲ್ ಸಾಲ್ಯಾನ್, ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರಾಂಶುಪಾಲೆ ಡಾ. ಸುಕನ್ಯಾ ಮೇರಿ ಜೆ., ತೆಂಕ ಗ್ರಾಪಂ ಅಧ್ಯಕ್ಷೆ ಅರುಣ ಕುಮಾರಿ, ಎಸ್.ವಿ.ಎಸ್. ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ.ಮಹೇಶ್ ಶೆಣೈ, ಅದಮಾರಿನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಪೈ, ಯೋಜನಾಧಿಕಾರಿಗಳಾದ ರಮಾನಂದ ರಾವ್, ಮಲ್ಲಿಕಾ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News