×
Ad

ಅಡುಗೆ ಅನಿಲ ಬೆಲೆ 85 ರೂ. ಏರಿಕೆ: ಮಾ.2ರಂದು ಮಹಿಳಾ ಕಾಂಗ್ರೆಸ್ ಪ್ರತಿಭಟನೆ

Update: 2017-03-01 22:20 IST

ಉಡುಪಿ, ಮಾ.1: ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ನ ಬೆಲೆಯನ್ನು 85ರೂ. ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್‌ನ ಬೆಲೆಯನ್ನು 145ರೂ. ಹೆಚ್ಚಿಸಿ ಆದೇಶಿಸಿದ ಕೇಂದ್ರದ ನರೇಂದ್ರ ಮೋದಿ ಸರಕಾರದ ಕ್ರಮವನ್ನು ವಿರೋಧಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಾಳೆ ಪ್ರತಿಭಟನೆ ನಡೆಸಲಿದೆ.

ಗುರುವಾರ ಸಂಜೆ 4:00ಗಂಟೆಗೆ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ಗಾಂಧಿ ಪ್ರತಿಮೆಯ ಎದುರು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಈ ಪ್ರತಿಭಟನೆ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷೆ ವರೋನಿಕಾ ಕರ್ನೇಲಿಯೊ ತಿಳಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News