ಕಾಂಗ್ರೆಸ್ ಸೇವಾದಳದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಶೆಟ್ಟಿ ಆಯ್ಕೆ
Update: 2017-03-02 21:01 IST
ಉಳ್ಳಾಲ, ಮಾ.2: ರಾಷ್ಟ್ರೀಯ ಕಾಂಗ್ರೆಸ್ ಸೇವಾದಳದ ವತಿಯಿಂದ ದ.ಕ. ಜಿಲ್ಲಾ ಕಾಂಗ್ರೆಸ್ ಸೇವಾದಳದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಶೆಟ್ಟಿ ಇವರನ್ನು ಆಯ್ಕೆ ಮಾಡಲಾಗಿದೆ.
ತುಳುನಾಡು ರಕ್ಷಣಾ ವೇದಿಕೆಯ ಮುಖಾಂತರ ಉಳ್ಳಾಲ ಘಟಕದ ಅಧ್ಯಕ್ಷರಾಗಿ ತೊಕ್ಕೊಟ್ಟಿನ ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆಯ ಪ್ರಸ್ತುತ ಸಾಲಿನ ನೂತನ ಉಪಾಧ್ಯಕ್ಷರಾಗಿ ಹಾಗೂ ದ.ಕ. ಜಿಲ್ಲಾ ಅಂಗವಿಕಲರ ಉಪಾಧ್ಯಕ್ಷರಾಗಿ, ಮಂಗಳೂರು ವಿಕಲಚೇತನರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಇವರು ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ.