ಮಾ.5: ಮೂಳೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2017-03-04 14:01 GMT

ಕಾಪು, ಮಾ.4: ಮೂಳೂರಿನ ಅಂಜುಮನ್ ಖಾದಿಮುಲ್ ಮುಸ್ಲಿಮೀನ್ ದಫ್ ಕಮಿಟಿಯ 40ನೆ ವಾರ್ಷಿಕೋತ್ಸವದ ಅಂಗವಾಗಿ ಮಾ.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮೂಳೂರಿನ ಜುಮಾ ಮಸೀದಿಯ ಆವರಣದಲ್ಲಿ ಆಯೋಜಿಸಲಾಗಿದೆ.

ಕಾಪು ನಸಿರ್ಂಗ್ ಹೋಂ ಸಹಭಾಗಿತ್ವದಲ್ಲಿ ಅಂದು ಬೆಳಗ್ಗೆ 9ರಿಂದ ಅಪರಾಹ್ನ 2:30ರವರೆಗೆ ಶಿಬಿರ ನಡೆಯಲಿದೆ.

ಶಿಬಿರವನ್ನು ಮೂಳೂರು ಜುಮಾ ಮಸೀದಿಯ ಮುದರ್ರಿಸ್ ಬಿ.ಕೆ.ಅಬ್ದುರ್ರಹ್ಮಾನ್ ಮದನಿ ಮೂಳೂರು ಉದ್ಘಾಟಿಸುವರು. ಮಸೀದಿ ಅಧ್ಯಕ್ಷ ಎಂ.ಎಚ್.ಬಿ. ಮುಹಮ್ಮದ್ ಅಧ್ಯಕ್ಷತೆ ವಹಿಸುವರು. ಅಲ್ಹಾಜ್ ಹೈದರಲಿ ಅಹ್ಸನಿ ಪ್ರಾಸ್ತಾವಿಕವಾಗಿ ಮಾತನಾಡುವರು.

ಮುಖ್ಯ ಅತಿಥಿಗಳಾಗಿ ಅದಾನಿ ಸಮೂಹ ಸಂಸ್ಥೆಯ ನಿರ್ದೇಶಕ ಕಿಶೋರ್ ಆಳ್ವ, ರಾಜ್ಯ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಫೂರ್, ಕಾಪು ಪುರಸಭೆಯ ಉಪಾಧ್ಯಕ್ಷ ಕೆ.ಎಚ್.ಉಸ್ಮಾನ್, ಸ್ಥಾಯಿ ಸಮಿತಿಯ ಅಧ್ಯಕ್ಷ ಅಬ್ದುಲ್ ಹಮೀದ್, ಮೂಳೂರು ಸುನ್ನಿ ಸೆಂಟರ್‌ನ ಮ್ಯಾನೇಜರ್ ಯು.ಕೆ.ಮುಸ್ತಫಾ ಸಅದಿ, ಮೂಳೂರು ಮಸೀದಿಯ ಗೌರವಾಧ್ಯಕ್ಷ ಅಬ್ರುರ್ರಹ್ಮಾನ್ ಶಾಬಾನ್ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News