ವಿಟ್ಲ: ಬಸ್-ಸಿಮೆಂಟ್ ಲಾರಿ ನಡುವೆ ಅಪಘಾತ, 12 ಜನರಿಗೆ ಗಾಯ
Update: 2017-03-04 17:09 IST
ವಿಟ್ಲ, ಮಾ.4: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾರಡ್ಕ ಬಳಿ ಕೇರಳ ಸರಕಾರಿ ಬಸ್ ಹಾಗೂ ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ 10 ಜನರಿಗೆ ಸಣ್ಣಪುಟ್ಟ, ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಅಫಘಾತದಿಂದ ಕೆಲ ಹೊತ್ತು ಸಂಚಾರ ವ್ಯವಸ್ಥೆ ಅಸ್ತ್ಯವ್ಯಸ್ತಗೊಂಡಿತ್ತು.
ಸ್ಥಳಕ್ಕೆ ಆಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.