×
Ad

ಸರಕಾರಿ ಸವಲತ್ತು ಸದುಪಯೋಗದಿಂದ ಶೈಕ್ಷಣಿಕ ಅಭಿವೃದ್ದಿ ಸಾಧ್ಯ : ಆದಂ ಕುಂಞಿ

Update: 2017-03-04 21:09 IST

ವಿಟ್ಲ, ಮಾ.4: ಶೈಕ್ಷಣಿಕ ಪ್ರಗತಿಗಾಗಿ ಸರಕಾರದಿಂದ ದೊರಕುವ ಎಲ್ಲಾ ರೀತಿಯ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಪ್ರಗತಿಯನ್ನು ಸಾಧಿಸಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಹಾಜಿ ಆದಂ ಕುಂಞಿ ಹೇಳಿದರು.

ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಶಾಲಾ 8ನೇ ತರಗತಿ ವಿದ್ಯಾರ್ಥಿಗಳಿಗೆ 2016-17ನೇ ಸಾಲಿನ ಉಚಿತ ಬೈಸಿಕಲ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಾಲಾಭಿವೃದ್ದಿ ಸಮಿತಿ ಹಾಗೂ ಶಾಲಾ ಶಿಕ್ಷಕ ವರ್ಗದ ಜೊತೆಗೆ ಪೋಷಕರ ಸಂಪೂರ್ಣ ಸಹಕಾರವಿದ್ದರೆ ಶಾಲೆಯ ಸರ್ವತೋಮುಖ ಅಭಿವೃದ್ದಿ ಸಾಧ್ಯ ಎಂದರು.

ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರೋಹಿತಾಶ್ವ ಅಧ್ಯಕ್ಷತೆ ವಹಿಸಿದ್ದರು. ನೆಟ್ಲಮುಡ್ನೂರು ಗ್ರಾ.ಪಂ. ಸದಸ್ಯರುಗಳಾದ ಡಿ. ತನಿಯಪ್ಪ ಗೌಡ ಹಾಗೂ ಅಬ್ದುಲ್ ಲತೀಫ್ ಮಾತನಾಡಿ ಶಾಲಾಭಿವೃದ್ದಿ ಸಮಿತಿ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಹೊಂದಾಣಿಕೆಯಿಂದ ಕರ್ತವ್ಯ ನಿರ್ವಹಿಸುವ ಮೂಲಕ ಶಾಲೆಯ ಅಭಿವೃದ್ದಿಗೆ ಶ್ರಮಿಸಬೇಕಾಗಿದೆ ಎಂದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರೇವತಿ, ಸದಸ್ಯರುಗಳಾದ ಪ್ರೇಮ, ಶಕೀಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಾಲಾಭಿವೃದ್ದಿ ಸಮಿತಿ ಸದಸ್ಯರುಗಳಾದ ಅಬೂಬಕ್ಕರ್ ಎನ್.ಕೆ., ಶೀನಪ್ಪ ಮುರುವ, ಝಾಹಿದ, ಉಮಾವತಿ, ಜಯಂತಿ ಹಾಗೂ ಸಾವಿತ್ರಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಇಂದಿರಾ ಸ್ವಾಗತಿಸಿ, ಸಹ ಶಿಕ್ಷಕಿ ನೀತಾ ವಂದಿಸಿದರು. ಶಿಕ್ಷಕ ಸುಧಾಕರ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News