×
Ad

ಮೂಳೂರು: ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2017-03-05 00:08 IST

ಕಾಪು, ಮಾ.4: ಮೂಳೂರಿನ ಅಂಜುಮನ್ ಖಾದಿಮುಲ್ ಮುಸ್ಲಿಮೀನ್ ದಫ್ ಕಮಿಟಿಯ 40ನೆ ವಾರ್ಷಿಕೋತ್ಸವದ ಅಂಗವಾಗಿ ಮಾ.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮೂಳೂರಿನ ಜುಮಾ ಮಸೀದಿಯ ಆವರಣದಲ್ಲಿ ಆಯೋಜಿಸಲಾಗಿದೆ.

ಕಾಪು ನಸಿರ್ಂಗ್ ಹೋಂ ಸಹಭಾಗಿತ್ವದಲ್ಲಿ ಅಂದು ಬೆಳಗ್ಗೆ 9ರಿಂದ ಅಪರಾಹ್ನ 2:30ರವರೆಗೆ ಶಿಬಿರ ನಡೆಯಲಿದೆ.

ಶಿಬಿರವನ್ನು ಮೂಳೂರು ಜುಮಾ ಮಸೀದಿಯ ಮುದರ್ರಿಸ್ ಬಿ.ಕೆ.ಅಬ್ದುರ್ರಹ್ಮಾನ್ ಮದನಿ ಮೂಳೂರು ಉದ್ಘಾಟಿಸುವರು. ಮಸೀದಿ ಅಧ್ಯಕ್ಷ ಎಂ.ಎಚ್.ಬಿ. ಮುಹಮ್ಮದ್ ಅಧ್ಯಕ್ಷತೆ ವಹಿಸುವರು. ಅಲ್ಹಾಜ್ ಹೈದರಲಿ ಅಹ್ಸನಿ ಪ್ರಾಸ್ತಾವಿಕವಾಗಿ ಮಾತನಾಡುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News