ಮಾ.6ರಂದು ಮಂಗಳೂರು ವಿವಿಯಲ್ಲಿ ‘ಚರಿತ್ರೆ ಮತ್ತು ಸಾಹಿತ್ಯ' ವಿಚಾರ ಸಂಕಿರಣ
Update: 2017-03-05 18:02 IST
ಕೊಣಾಜೆ, ಮಾ.5: ಮಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಚರಿತ್ರೆ ಮತ್ತು ಸಾಹಿತ್ಯ ಎಂಬ ವಿಷಯದಲ್ಲಿ ಎರಡು ದಿನಗಳ ರಾಜ್ಯಮಟ್ಟದ ವಿಚಾರಸಂಕಿರಣದ ಉದ್ಘಾಟನೆಯು ಮಾ.6ರಂದು ಸೋಮವಾರ ಬೆಳಿಗ್ಗೆ 9.30ಕ್ಕೆ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಇತಿಹಾಸ ವಿಭಾಗದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ.ಬಿ.ಸುರೇಂದ್ರ ರಾವ್ ಅವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗು ಮಂಗಳೂರು ವಿವಿ ಕುಲಸಚಿವ ಪ್ರೊ.ಲೋಕೇಶ್ ಅವರು ವಹಿಸಲಿದ್ದಾರೆ.
ಅಧ್ಯಕ್ಷತೆಯನ್ನು ಪ್ರೊ.ವಿಜಯ ಪೂಣಚ್ಚ ತಂಬಂಡ ಅವರು ವಹಿಸಲಿದ್ದು, ಕಾರ್ಯಕ್ರಮದ ಸಂಯೋಜಕರಾದ ಪ್ರೊ.ಉದಯ ಬಾರ್ಕೂರು ಅವರು ಉಪಸ್ಥಿತರಿರುವರು. ಬಳಿಕ ವಿದ್ಯಾರ್ಥಿಗಳೊಂದಿಗೆ ಮುಖಾಮುಖಿ ಕಾರ್ಯಕ್ರಮವು ನಡೆಯಲಿದ್ದು, ಇದರಲ್ಲಿ ವಿದ್ವಾಂಸ ಪ್ರೊ.ಬಿ.ಎ.ವಿವೇಕ್ ರೈ ಹಾಗೂ ಪ್ರೊ.ಬಿ.ಸುರೇಂದ್ರ ರಾವ್ ಅವರು ಭಾಗವಹಿಸಲಿದ್ದಾರೆ. ಪ್ರೊ.ಅಶ್ವಥ್ಥ ನಾರಾಯಣ ಅಧ್ಯಕ್ಷತೆ ವಹಿಸಲಿದ್ದಾರೆ.