ದ.ಕ. ಜಿಲ್ಲಾ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಸಭೆ

Update: 2017-03-05 18:58 GMT

ಮಂಗಳೂರು, ಮಾ.5: ಭಡ್ತಿಯಲ್ಲಿ ಮೀಸಲಾತಿ ಅಸಾಂವಿಧಾನಿಕ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದು ಸರಿಯಲ್ಲ. ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿಯೋಗವು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ. ಈ ತೀರ್ಪನ್ನು ಪುನರ್ ಪರಿಶೀಲನೆ ಹಾಗೂ ಕಾನೂನು ತಜ್ಞರೊಂದಿಗೆ ಚರ್ಚಿಸಲು ಮಾ.11ರಂದು ಬೆಂಗಳೂರು ಪುರಭವನದಲ್ಲಿ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿಯ ಜಿಲ್ಲಾಧ್ಯಕ್ಷ ಆಂಜನೇಯ ಸ್ವಾಮಿ ತಿಳಿಸಿದ್ದಾರೆ.

ನಗರದ ದ.ಕ. ಜಿಲ್ಲಾ ನೌಕರರ ಸಂಘದ ಕಚೇರಿಯಲ್ಲಿ ರವಿವಾರ ನಡೆದ ಜಿಲ್ಲಾ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಲ್ಲಿ ಎಸ್ಸಿ-ಎಸ್ಟಿ ನೌಕರರರ ಸಭೆಗಳನ್ನು ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೋರಾಟವನ್ನು ಮಾಡಲಾಗುವುದು. ಅಲ್ಲದೆ ಇದರ ಸಾಧಕ-ಬಾಧಕಗಳ ಕುರಿತು ಚರ್ಚಿಸಲಾಗುವುದು ಎಂದ ಆಂಜನೇಯ ಸ್ವಾಮಿ, ತೀರ್ಪಿನ ಪುನರ್ ಪರಿಶೀಲನೆ ಸಂದರ್ಭ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದರು.

ಮಾ.11ರಂದು ನಡೆಯುವ ವಿಚಾರ ಸಂಕಿರಣದಲ್ಲಿ ಹೈಕೋರ್ಟ್‌ನ ನ್ಯಾಯಾೀಶರು, ಸಿ.ಎಸ್.ದ್ವಾರಕಾನಾಥ್ ಸೇರಿದಂತೆ ಹಲವು ತಜ್ಞರು ಭಾಗವಹಿಸಲಿದ್ದಾರೆ ಎಂದವರು ಹೇಳಿದರು.

ದಲಿತ ಮುಖಂಡ ಲೋಲಾಕ್ಷ ಮಾತನಾಡಿ, ಸಂವಿಧಾನದ ಬಗ್ಗೆ ಜನರಲ್ಲಿ ಕೆಲವು ಅಪಕಲ್ಪನೆಗಳಿವೆ. ಸುಪ್ರೀಂಕೋರ್ಟ್‌ನ ಹೇಳಿಕೆಯು ಸತ್ಯಾಂಶಗಳಿಂದ ಕೂಡಿಲ್ಲ. ಈ ತೀರ್ಪು ದಲಿತ ವಿರೋ ಮನಸ್ಸುಗಳು ಸೇರಿ ಮಾತನಾಡಿದ ಹಾಗಿದೆ ಎಂದರು.

ಸಭೆಯಲ್ಲಿ ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಕಾರಿ ಜ್ಞಾನೇಶ್, ಉಪನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷಕ ಶಂಕರಪ್ಪ, ರಾಜ್ಯ ದಲಿತ ಸಂಘರ್ಷ ಸಮಿತಿಯ ಗೌರವಾಧ್ಯಕ್ಷ ಎಂ. ದೇವದಾಸ್, ಉಪನಿರ್ದೇಶಕರ ಕಚೇರಿಯ ಅೀಕ್ಷಕ ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News