ಮಾಜಿ ಲೋಕಾಯುಕ್ತ ಭಾಸ್ಕರ್ ರಾವ್ ಮೇಲ್ಮನವಿ ಸುಪ್ರೀಂನಲ್ಲಿ ವಜಾ
Update: 2017-03-06 11:43 IST
ಹೊಸದಿಲ್ಲಿ. ಮಾ.6: ತನ್ನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ ರಾವ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
ಭಾಸ್ಕರ ರಾವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಸುಪ್ರೀಂ ಕೋರ್ಟ್ ಪ್ರಕರಣದಲ್ಲಿ ಭಾಸ್ಕರ ರಾವ್ ಗೆ ವಿಚಾರಣೆ ಎದುರಿಸಲು ಸೂಚಿಸಿದೆ.
ಕರ್ನಾಟಕ ಹೈಕೋರ್ಟ್ ವಿಚಾರಣೆಗೆ ಹಾಜರಾಗಲು ಜಸ್ಟೀಸ್ ಭಾಸ್ಕರ ರಾವ್ ಗೆ ಸಮನ್ಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.