ಬೇಸಿಗೆಯಲ್ಲಿ ವಿದ್ಯುತ್ ಕಡಿತವಿಲ್ಲ: ಇಂಧನ ಸಚಿವ ಡಿ.ಕೆ.ಶಿವಕುಮಾರ್
ಬೆಂಗಳೂರು, ಮಾ. 6: ರಾಜ್ಯದಲ್ಲಿ ಬರ ಪರಿಸ್ಥಿತಿಯಿದ್ದು, ಜಲಾಶಯಗಳಲ್ಲಿ ನೀರಿನ ಸಂಗ್ರಹದ ಕೊರತೆಯಿದ್ದರೂ, ವಿದ್ಯುತ್ ಉತ್ಪಾದನೆ ಪ್ರಮಾಣ ಹೆಚ್ಚಳವಾಗಿದ್ದು, ಪ್ರಸ್ತುತ ಬೇಸಿಗೆಯಲ್ಲಿ ವಿದ್ಯುತ್ ಕಡಿತ ಮಾಡುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, 10,422 ಮೆ.ವ್ಯಾ.ವಿದ್ಯುತ್ ಅಗತ್ಯವಿದೆ. ಆದರೆ, ರಾಜ್ಯದಲ್ಲಿ 1 ಸಾವಿರ ಮೆ.ವ್ಯಾ.ನಷ್ಟು ಹೆಚ್ಚುವರಿ ವಿದ್ಯುತ್ ಲಭ್ಯತೆಯಿದೆ ಎಂದು ಇದೇ ವೇಳೆ ಅಂಕಿ-ಅಂಶಗಳನ್ನು ನೀಡಿದರು.
ರಾಯಚೂರಿನ ಯರಮರಸ್ ಸೇರಿದಂತೆ ವಿವಿಧ ಉತ್ಪಾದನಾ ಘಟಕಗಳಿಂದ ಕಳೆದ ವಾರವಷ್ಟೇ 1,300 ಮೆ.ವ್ಯಾ.ವಿದ್ಯುತ್ ಲಭ್ಯವಾಗುತ್ತಿದ್ದು, ಇನ್ನೂ ಕೆಲ ದಿನಗಳಲ್ಲಿ ಮತ್ತಷ್ಟು ವಿದ್ಯುತ್ ದೊರೆಯುವ ನಿರೀಕ್ಷೆಯಿದೆ. ಹೀಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಆಭಯ ನೀಡಿದರು.
‘ಭಡ್ತಿ ಮೀಸಲಾತಿ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ’
-ಡಿ.ಕೆ.ಶಿವಕುಮಾರ್ ಇಂಧನ ಸಚಿವ