×
Ad

ಮಂಗಳೂರು: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

Update: 2017-03-06 21:01 IST

ಪುತ್ತೂರು, ಮಾ.6: ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ರವಿವಾರ ಪುತ್ತೂರು ನಗರ ಪೊಲೀಸರು ಭಾನುವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಪುತ್ತೂರು ತಾಲೂಕಿನ ಕೊಡಿಪ್ಪಾಡಿ ನಿವಾಸಿ ಅದ್ರಾಮ ಎಂಬವರ ಪುತ್ರ ಅಬ್ದುಲ್ಲಾ ಕೆ. (35) ಬಂಧಿತ ಆರೋಪಿ. 2004 ರಲ್ಲಿ ಹೊಡೆದಾಟ ಪ್ರಕರಣ ಮತ್ತು 2005 ರಲ್ಲಿ ಖಾಸಗಿ ಫಿರ್ಯಾದಿಯಲ್ಲಿ ಆರೋಪಿಯಾಗಿದ್ದ ಅಬ್ದುಲ್ಲಾ ಕೆ. ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ.

2015 ಮೇ 5 ಹಾಗೂ 2016 ರ ಮಾ. 9 ರಂದು ಈತನ ಬಂಧನಕ್ಕೆ ವಾರಂಟ್ ಹೊರಡಿಸಲಾಗಿತ್ತು. ವಾರಂಟ್ ಆಧಾರದಲ್ಲಿ ಪೊಲೀಸರು ಲುಕ್ ಔಟ್ ನೋಟೀಸ್ ಜಾರಿ ಮಾಡಿದ್ದರು.

ಮಾ. 5 ರಂದು ಅಬ್ದುಲ್ಲಾ ವಿದೇಶದಿಂದ ಆಗಮಿಸುತ್ತಿರುವ ಕುರಿತು ಮಾಹಿತಿ ಪಡೆದ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News