ಪೊಲೀಸ್ ಇಲಾಖೆ ಸಿಬ್ಬಂದಿಗೆ ಕಿಡ್ನಿ ಸಮಸ್ಯೆಯ ಬಗ್ಗೆ ಉಪನ್ಯಾಸ ಹಾಗೂ ಉಚಿತ ತಪಾಸಣೆ
Update: 2017-03-06 22:42 IST
ಮಂಗಳೂರು, ಮಾ. 6: ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಕಾನ್ಫರೆನ್ಸ್ ಹಾಲ್‌ನಲ್ಲಿ ವಿಶ್ವ ಕಿಡ್ನಿ ದಿನಾಚರಣೆಯ ಅಂಗವಾಗಿ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ನೆಪ್ರೊಲಜಿ ಮತ್ತು ಯುರೋಲಜಿ ವಿಭಾಗಗಳ ಜಂಟಿ ಆಶ್ರಯದಲ್ಲಿ ನುರಿತ ವೈದ್ಯಾಧಿಕಾರಿ ಹಾಗೂ ಸಹಾಯಕ ಸಿಬ್ಬಂದಿಯವರಿಂದ ಪೊಲೀಸ್ ಇಲಾಖೆಯ ಅಧಿಕಾರಿ, ಮತ್ತು ಆಡಳಿತ ಸಿಬ್ಬಂದಿಗೆ ಕಿಡ್ನಿ ಸಮಸ್ಯೆ, ಸಂರಕ್ಷಣೆಯ ಬಗ್ಗೆ ಉಪನ್ಯಾಸ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಕಾರ್ಯಕ್ರಮ ಸೋಮವಾರ ನಡೆಯಿತು.