ಪ್ರಜಾಪತಿ ವಿರುದ್ಧ ಎಫ್‌ಐಆರ್ ದಾಖಲೆಗೆ ಸೂಚಿಸಿದ ಆದೇಶ ಹಿಂಪಡೆಯಲು ಸುಪ್ರೀಂಕೋರ್ಟ್ ನಿರಾಕರಣೆ

Update: 2017-03-06 17:20 GMT

ಹೊಸದಿಲ್ಲಿ, ಮಾ.7: ಬಂಧನದಿಂದ ಪಾರಾಗುವ ಯತ್ನದಲ್ಲಿರುವ ಉತ್ತರಪ್ರದೇಶದ ಸಚಿವ ಗಾಯತ್ರಿ ಪ್ರಜಾಪತಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ತನ್ನ ವಿರುದ್ಧ ಎಫ್‌ಆರ್ ದಾಖಲಿಸಬೇಕೆಂದು ಸುಪ್ರೀಂಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ವಾಪಾಸು ಪಡೆಯಬೇಕೆಂದು ಪ್ರಜಾಪತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಅಲ್ಲದೆ , ಪ್ರಜಾಪತಿ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ತಾನು ನೀಡಿದ್ದ ಆದೇಶಕ್ಕೆ ರಾಜಕೀಯ ಬಣ್ಣ ತುಂಬಲು ನಡೆಯುತ್ತಿರುವ ಪ್ರಯತ್ನಗಳ ಬಗ್ಗೆಯೂ ಸುಪ್ರೀಂಕೋರ್ಟ್ ಅಸಮಾಧಾನ ಸೂಚಿಸಿದೆ.

ಎಫ್‌ಐಆರ್ ದಾಖಲಿಸುವಂತೆ ಉತ್ತರಪ್ರದೇಶ ಪೊಲೀಸರಿಗೆ ಸೂಚಿಸಲಾಗಿದೆ ಅಷ್ಟೆ. ಕೇಸಿನ ಮೇಲ್ವಿಚಾರಣೆ ನಡೆಸಲು ಸೂಚಿಸಿಲ್ಲ ಎಂದು ಉತ್ತರ ಪ್ರದೇಶದ ಪೊಲೀಸರ ಕಾರ್ಯವೈಖರಿಗೆ ಸುಪ್ರೀಂಕೋರ್ಟ್‌ನ ವಿಭಾಗೀಯ ಪೀಠವೊಂದು ಅಸಮಾಧಾನ ಸೂಚಿಸಿದೆ. ಸಚಿವರು ಸಂಬಂಧಿತ ಕೋರ್ಟ್ ಅನ್ನು ಸಂಪರ್ಕಿಸಿ ಸಮಸ್ಯೆಗೆ ಪರಿಹಾರ ಪಡೆಯಬಹುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News