10ರಂದು ಮಹಿಳಾ ಹ್ಯಾಂಡ್‌ಬಾಲ್ ಪಂದ್ಯಾಟ
Update: 2017-03-07 00:10 IST
ಉಡುಪಿ, ಮಾ.6: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ವಿವಿ ಅಂತರ್ ಕಾಲೇಜು ಮಹಿಳಾ ಹ್ಯಾಂಡ್‌ಬಾಲ್ ಪಂದ್ಯಾಟವು ಮಾ.10ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.
ಬೆಳಗ್ಗೆ 10ಗಂಟೆಗೆ ಪಂದ್ಯಾಟವನ್ನು ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿರುವರು. ಮಂಗಳೂರು ವಿವಿಯ ಶಾರೀರಿಕ ಶಿಕ್ಷಣ ನಿರ್ದೇಶಕ ಡಾ. ಕಿಶೋರ್ ಕುಮಾರ್ ಸಿ.ಕೆ., ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷ ಜಯ ಕುಮಾರ್ ಬೆಳ್ಕಳೆ, ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್.ಹೆಗ್ಡೆ ಭಾಗವಹಿಸಲಿರುವರು. ಈ ಪಂದ್ಯಾಟದಲ್ಲಿ ಹದಿನೈದಕ್ಕೂ ಹೆಚ್ಚು ತಂಡಗಳು ಪಾಲ್ಗೊಳ್ಳಲಿವೆ ಎಂದು ಪ್ರಕಟನೆ ತಿಳಿಸಿದೆ.