×
Ad

ಮಾ.13 ರಂದು ಎಸ್ ಎಂ. ಕೃಷ್ಣ ಬಿಜೆಪಿ ಸೇರ್ಪಡೆ ?

Update: 2017-03-07 12:30 IST

ಬೆಂಗಳೂರು,ಮಾ.7: ಕಾಂಗ್ರೆಸ್ ತೊರೆದಿರುವ ಮಾಜಿ ಮುಖ್ಯ ಮಂತ್ರಿ ಎಸ್ ಎಂ ಕೃಷ್ಣ  ಅವರು ಮಾ.13ರಂದು ದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಬಿಜೆಪಿಗೆ ಅಧಿಕೃತವಾಗಿ ಸೇರಲಿದ್ದಾರೆಂದು ತಿಳಿದು ಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಈಗಾಗಲೇ ಎಸ್‌.ಎಂ. ಕೃಷ್ಣರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಬಿಜೆಪಿ ಸೇರ್ಪಡೆ ಬಗ್ಗೆ ಹಾದಿ ಸುಗಮಗೊಳಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News