×
Ad

ನೆಲ್ಲಿಕಾರು: ಗ್ರಾಮವಿಕಾಸ ಯೋಜನೆಗೆ ಚಾಲನೆ

Update: 2017-03-07 21:13 IST

ಮೂಡುಬಿದಿರೆ, ಮಾ.7: ನೆಲ್ಲಿಕಾರು ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಮಂಗಳವಾರ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡುವ ಮೂಲಕ ಶಾಸಕ ಅಭಯಚಂದ್ರ ಚಾಲನೆ ನೀಡಿದರು.

 ನಂತರ ಮಾತನಾಡಿದ ಅವರು ನೆಲ್ಲಿಕಾರು ಗ್ರಾಮ ಪಂಚಾಯತು ಮುಖ್ಯಮಂತ್ರಿಗಳ ಗ್ರಾಮವಿಕಾಸ ಯೋಜನೆಗೆ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ಯೋಜನೆಗಳನ್ನು 75 ಲಕ್ಷ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಯಲ್ಲಿ ರಸ್ತೆ, ಸಮುದಾಯ ಭವನ, ಜಿಮ್‌ನ ನಿರ್ಮಾಣ ಮಾಡಲಾಗುವುದುಎಂದರು.

ಈ ಸಂದರ್ಭ ನೆಲ್ಲಿಕಾರು ಗ್ರಾ.ಪಂ. ಅಧ್ಯಕ್ಷ ಜಯಂತ ಹೆಗ್ಡೆ, ಸಂಪತ್ ಸಾಮ್ರಾಜ್ಯ, ಮಾಜಿ ತಾ.ಪಂ. ಸದಸ್ಯ ರುಕ್ಕಯ್ಯ ಪೂಜಾರಿ, ಮೆಸ್ಕಾಂ ಸಲಹಾ ಸಮಿತಿ ಸದಸ್ಯ ಶಿವಾನಂದ ಎಸ್. ಪಾಂಡ್ರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮೂಡಾ ಮಾಜಿ ಅಧ್ಯಕ್ಷ ಸುರೇಶ್ ಕೋಟ್ಯಾನ್, ಧನಂಜಯ ಆಳ್ವ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News