ಮಂಗಳೂರು: ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಸನ್ಮಾನ
Update: 2017-03-08 19:02 IST
ಮಂಗಳೂರು, ಮಾ.8: ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ವಿವಿಧ ಕ್ಷೇತ್ರದ ಐವರು ಗಣ್ಯರನ್ನು ಸಂಸ್ಥೆಯ ಅಧ್ಯಕ್ಷ ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್‌ರ ಅಧ್ಯಕ್ಷತೆಯಲ್ಲಿ ಕಮಿಟಿಯ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್.ಖಾದರ್, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ಕರಾವಳಿ ಅಲ್ಪಸಂಖ್ಯಾತರ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಹಾಜಿ ಇಸಾಕ್, ಮದ್ರಸ ಮ್ಯಾನೇಜ್‌ಮೆಂಟ್ ಅಧ್ಯಕ್ಷ ಹಾಜಿ ಐ. ಮೊಯ್ದಿನಬ್ಬ, ನಗರ ಸಂಚಾರಿ ನಿಯಂತ್ರಣ ಮಾಡುತ್ತಿರುವ ಅಬ್ದುರ್ರವೂಫ್‌ರನ್ನು ಸನ್ಮಾನಿಸಲಾಯಿತು.
ಸಂಸ್ಥೆಯ ಉಪಾಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಅಭಿನಂದನಾ ಭಾಷಣಗೈದರು.
ಉಪಾಧ್ಯಕ್ಷ ಹಾಜಿ ಭಾಷಾ ಸಾಹೇಬ್, ಇಮ್ತಿಯಾಝ್ ಕಾರ್ಕಳ, ಕೋಶಾಧಿಕಾರಿ ಹಾಜಿ ಮೂಸಾ ಮೊಯ್ದಿನ್ ಮತ್ತಿತರರು ಉಪಸ್ಥಿತರಿದ್ದರು.