ಉಡುಪಿ: ಅಂಬಲಪಾಡಿ ಸನಿವಾಸ ಶಿಬಿರದ ಸಮಾರೋಪ

Update: 2017-03-08 16:58 GMT

ಉಡುಪಿ, ಮಾ.8: ಯಕ್ಷಗಾನ ಕಲಾರಂಗದ ಆಶ್ರಯದಲ್ಲಿ ಅಂಬಲಪಾಡಿ ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ಹಮ್ಮಿಕೊಳ್ಳಲಾದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ ಇದರ 360 ವಿದ್ಯಾರ್ಥಿಗಳ ಐದು ದಿನಗಳ ಸನಿವಾಸ ಶಿಬಿರದ ಸಮಾರೋಪ ಸಮಾರಂಭ ಬುಧವಾರ ನಡೆಯಿತು.

ಮುಖ್ಯ ಅತಿಥಿಯಾಗಿ ಮಣಿಪಾಲ ವಿವಿಯ ಸಹಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಅಧ್ಯಕ್ಷತೆಯನ್ನು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ. ವಿಜಯ ಬಲ್ಲಾಳ್ ವಹಿಸಿದ್ದರು.

 ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಜಿ.ಎಂ. ಕೆ.ದೇವಾನಂದ ಉಪಾಧ್ಯಾಯ, ಪ್ರೈಮ್ ಸ್ಥಾಪಕ ರತ್ನಕುಮಾರ್, ಮಂಗಳೂರಿನ ಎಂಎಸ್‌ಇಝೆಡ್‌ಎಲ್‌ನ ನಿವೃತ್ತ ಜಿಎಂ ಎಸ್.ಟಿ.ಕರ್ಕೇರ, ಕಾಪು ವಿನೋದ ಚಂದ್ರಶೇಖರ್ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಸೀಮಾ ಎಚ್.ರೈ ಮುಖ್ಯ ಅತಿಥಿಗಳಾಗಿದ್ದರು.

ಶಿಬಿರದ ನಿರ್ದೇಶಕ ಪ್ರವೀಣ್ ಗುಡಿ ಧಾರವಾಡ, ಯಕ್ಷಗಾನ ಕಲಾ ರಂಗದ ಉಪಾಧ್ಯಕ್ಷ ಗಂಗಾಧರ ರಾವ್ ಉಪಸ್ಥಿತರಿದ್ದರು. ಅಧ್ಯಕ್ಷ ಗಣೇಶ್ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News