ಕವಿತಾ ಸನಿಲ್ ಮಂಗಳೂರು ಮೇಯರ್?

Update: 2017-03-09 05:26 GMT

ಮಂಗಳೂರು, ಮಾ.8: ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮನಪಾ ಸ್ಥಾಯಿ ಸಮಿತಿಯ ಅಧ್ಯಕ್ಷೆ ಕವಿತಾ ಸನಿಲ್ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆದ ಪಕ್ಷದ ಆಂತರಿಕ ಚುನಾವಣೆಯಲ್ಲಿ ಕವಿತಾ ಸನಿಲ್ ಒಂದು ಮತದಿಂದ ಗೆದ್ದಿದ್ದಾರೆ. ಈ ಮೂಲಕ ಮೇಯರ್ ಸ್ಥಾನದ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮೇಯರ್ ಅಭ್ಯರ್ಥಿ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಕಾರ್ಪೊರೇಟರ್‌ಗಳಾದ ಕವಿತಾ ಸನಿಲ್, ಪ್ರತಿಭಾ ಕುಳಾಯಿ ಮತ್ತು ಅಪ್ಪಿ ಆಕಾಂಕ್ಷಿಗಳಾಗಿದ್ದರು. ಕವಿತಾ ಮತ್ತು ಪ್ರತಿಭಾರ ನಡುವೆ ತೀವ್ರ ಪೈಪೋಟಿ ಇತ್ತು. ಈ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯವರೆಗೆ ನಡೆದ ಪಕ್ಷದ ಸಭೆಯಲ್ಲಿ ಅಂತಿಮವಾಗಿ ಚುನಾವಣೆಯ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಯಿತು. ಕೆಪಿಸಿಸಿ ವಕ್ತಾರರು ವೀಕ್ಷಕರಾಗಿ ಆಗಮಿಸಿದ್ದರು.

ಮೇಯರ್, ಉಪಮೇಯರ್ ಚುನಾವಣೆಯೂ ಮಾ.9ರಂದು ಮನಪಾ ಸಭಾಂಗಣದಲ್ಲಿ ನಡೆಯಲಿದೆ. ಮನಪಾದಲ್ಲಿ ಕಾಂಗ್ರೆಸ್ 35, ಬಿಜೆಪಿ, 20, ಜೆಡಿಎಸ್ 2 ಹಾಗೂ ಸಿಪಿಎಂ, ಎಸ್‌ಡಿಪಿಐ ಹಾಗೂ ಪಕ್ಷೇತರ ತಲಾ 1 ಸ್ಥಾನಗಳನ್ನು ಹೊಂದಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News