ಮಂಗಳೂರು ವಿವಿ ಕಾಲೇಜು ವಿದ್ಯಾರ್ಥಿಗಳಿಗೆ ಹಲ್ಲೆ
Update: 2017-03-09 12:42 IST
ಮಂಗಳೂರು, ಮಾ.7: ಮಂಗಳೂರು ವಿವಿ ಕಾಲೇಜಿನ ಇಬ್ಬರು ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳಿಗೆ ಎಬಿವಿಪಿ ಕಾರ್ಯಕರ್ತರೆನ್ನಲಾದ ಅದೇ ಕಾಲೇಜಿನ ಅಂತಿಮ ಬಿಬಿಬ ವಿದ್ಯಾರ್ಥಿಗಳ ತಂಡವೊಂದು ಹಲ್ಲೆ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಉಕಾಂತ್ ಮತ್ತು ನವಾಝ್ ಹಲ್ಲೆಗೊಳಗಾದ ವಿದ್ಯಾರ್ಥಿಗಳು. ಇವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಮೇಲೆ ಗಂಭೀರ ಹಲ್ಲೆ ನಡೆಸಿದ್ದು, ಆರೋಪಿಗಳು ಪರಾರಿಯಾಗಿದ್ದಾರೆನ್ನಲಾಗಿದೆ. ಘಟನೆಯ ಬಗ್ಗೆ ಪಾಂಡೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.