×
Ad

ಜಯಲಲಿತಾರ ಕ್ಷೇತ್ರದಲ್ಲಿ ಎ.12ಕ್ಕೆ ಉಪಚುನಾವಣೆ

Update: 2017-03-09 16:04 IST

ಚೆನ್ನೈ,ಮಾ.9: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿಧನದಿಂದ ತೆರವಾಗಿರುವ ಚೆನ್ನೈನ ಆರ್.ಕೆ.ನಗರ ವಿಧಾನಸಭಾ ಕ್ಷೇತ್ರದಲ್ಲಿ ಎ.12ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗವು ಗುರುವಾರ ಪ್ರಕಟಿಸಿದೆ. ಇದರೊಂದಿಗೆ ಚುನಾವಣಾ ನೀತಿ ಸಂಹಿತೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ.

ಮಾ.16ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಮಾ.23 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಮಾ.24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿಯಲು ಮಾ.27 ಕೊನೆಯ ದಿನಾಂಕವಾಗಿದೆ. ಮತಗಳ ಎಣಿಕೆ ಎ.15ರಂದು ನಡೆಯಲಿದೆ.

ಇದು ಆರ್.ಕೆ.ನಗರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಮೂರನೇ ವರ್ಷ ನಡೆಯಲಿರುವ ಚುನಾವಣೆಯಾಗಿದೆ. 2014ರಲ್ಲಿ ಅಕ್ರಮ ಸಂಪತ್ತು ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ಖುಲಾಸೆಗೊಂಡ ನಂತರ ಜಯಲಲಿತಾ ಅವರು  ಈ ಕ್ಷೇತ್ರದಲ್ಲಿ ಉಪಚುನಾವಣೆಯನ್ನು ಗೆದ್ದು ಮತ್ತೆ ವಿಧಾನಸಭೆಯನ್ನು ಪ್ರವೇಶಿಸಿದ್ದರು. ಮೇ,2016ರಲ್ಲಿ ವಿಧಾನಸಭಾ ಚುನಾವಣೆಗಳು ನಡೆದಾಗಲೂ ಜಯಲಲಿತಾ ಇಲ್ಲಿಂದಲೇ ಸ್ಪರ್ಧಿಸಿ ಗೆದ್ದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News