×
Ad

ಗಾಂಜಾ ಬೆಳೆದ ವ್ಯಕ್ತಿಗೆ ಶಿಕ್ಷೆ

Update: 2017-03-09 20:19 IST

ಚಾಮರಾಜನಗರ, ಮಾ. 9: ಅಕ್ರಮವಾಗಿ ಗಾಂಜಾ ಬೆಳೆದ ವ್ಯಕ್ತಿಯೊಬ್ಬರಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 2 ವರ್ಷಗಳ ಸಜೆ ಮತ್ತು 2 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಕೊಳ್ಳೇಗಾಲ ತಾಲೂಕಿನ ರಾಮಾಪುರದ ದೊಮ್ಮನಗದ್ದೆ ಗ್ರಾಮದ ರಾಜೂನಾಯ್ಕ ತನ್ನ ತಾಯಿಯ ಹೆಸರಿನಲ್ಲಿದ್ದ ಜಮೀನಿನಲ್ಲಿ ಮೆಣಸಿನ ಫಸಲಿನ ಜತೆ ಅಕ್ರಮವಾಗಿ 22 ಗಾಂಜಾಗಿಡಗಳನ್ನು ಬೆಳೆದಿದ್ದರು.

ಈ ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ಅಪರಾಧಿಗೆ 2 ವರ್ಷಗಳ ಸಜೆ ಹಾಗೂ 2 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರ್ಕಾರದ ಪರವಾಗಿ ಸರ್ಕಾರದ ಅಭಿಯೋಜಕರಾದ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News