ಪುತ್ತೂರು: ಮಾ.11ರಂದು ಮಹಿಳಾ ಪೊಲೀಸ್ ಠಾಣೆ ಉದ್ಘಾಟನೆ
ಪುತ್ತೂರು, ಮಾ.9: ಇಲ್ಲಿನ ನಗರ ಠಾಣೆಯಲ್ಲಿ ಈ ತನಕ ಕಾರ್ಯಾಚರಿಸುತ್ತಿದ್ದ ಮಹಿಳಾ ಪೊಲೀಸ್ ಠಾಣೆ ಮಾ.11ರಂದು ನೂತನ ಪೊಲೀಸ್ ಠಾಣೆಗೆ ಸ್ಥಳಾಂತರಗೊಂಡು ಉದ್ಘಾಟನೆಗೊಳ್ಳಲಿದೆ.
ಬೆಳಿಗ್ಗೆ 9 ಗಂಟೆಗೆ ರಾಜ್ಯ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ನೂತನ ಠಾಣೆಯನ್ನು ಉದ್ಘಾಟಿಸಲಿದ್ದಾರೆ.
ಶಾಸಕಿ ಶಕುಂತಳಾ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್, ಸರ್ಕಾರದ ಮುಖ್ಯ ಸಚೇತಕ ಐವನ್ ಡಿಸೋಜ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಜೆ.ಆರ್. ಲೋಭೋ, ಅಭಯಚಂದ್ರ ಜೈನ್, ಆಂಗಾರ, ಮೊಯ್ದೀನ್ ಬಾವಾ, ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ, ಪ್ರತಾಪ್‌ಚಂದ್ರ ಶೆಟ್ಟಿ, ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎ.ಎಂ. ಪ್ರಸಾದ್, ಪಶ್ವಿಮ ವಲಯ ಪೊಲೀಸ್ ಮಹಾನಿರೀಕ್ಷಕ ಪಿ. ಹರಿಶೇಖರನ್, ದ.ಕ. ಪೊಲೀಸ್ ಆಯುಕ್ತ ಎಂ .ಚಂದ್ರಶೇಖರನ್, ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.