ಎ.ಜೆ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ
Update: 2017-03-10 16:14 IST
ಮಂಗಳೂರು, ಮಾ.10: ಲಕ್ಷ್ಮೀ ಮೆಮೋರಿಯಲ್ ಎಜುಕೇಷನ್ ಟ್ರಸ್ಟ್‌ನ ಅಂಗಸಂಸ್ಥೆಯಾದ ಎ.ಜೆ. ಇಂಜಿನಿಯರಿಂಗ್ ಮತ್ತು ತಾಂತ್ರಿಕ ವಿದ್ಯಾಲಯದ ಮಹಿಳಾ ಸಮಿತಿಯ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಇತ್ತೀಚೆಗೆ ಕಾಲೇಜಿನ ಸಭಾಭವನದಲ್ಲಿ ಆಚರಿಸಲಾಯಿತು.
ವಿದ್ಯಾರ್ಥಿನಿ ಪ್ರಶಾಂತಿ ಶೆಟ್ಟಿಯವರ ಸ್ವಾಗತ ನೃತ್ಯದ ಮೂಲಕ ಕಾರ್ಯಕ್ರಮ ಆರಂಭಗೊಂಡಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಆಸರೆ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕಿ ಡಾ.ಆಶಾಜ್ಯೋತಿ ರೈ, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಇದರಿಂದ ಸಮಾಜದ ಮೇಲೆ ಉಂಟಾಗುವ ಪರಿಣಾಮಗಳ ಮೇಲೆ ಬೆಳಕು ಚೆಲ್ಲಿದರು.
ಕಾಲೇಜಿನ ಪಾಂಶುಪಾಲ ಡಾ.ಶಾಂತಾರಾಮ ರೈ ಸ್ವಾಗತಿಸಿದರು. ಆದ್ಯಾ ರೈ ಮುಖ್ಯ ಅಥಿತಿಯನ್ನು ಸಭೆಗೆ ಪರಿಚಯಿಸಿದರು. ಝುಹಾ ವಾಸಿಂ ಕಾರ್ಯಕ್ರವ ನಿರ್ವಹಿಸಿದರು.
ಕಾಲೇಜಿನ ಮಹಿಳಾ ಸಮಿತಿಯ ಅಧ್ಯಕ್ಷೆ ಡಾ.ಶಾಂತಾ ಕುಮಾರಿ ವಂದಿಸಿದರು. ಸಮಿತಿಯ ಕಾರ್ಯದರ್ಶಿ ಡಾ.ಶೋಭಿತಾ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.