ಪಿಲಿಕುಳದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
Update: 2017-03-10 19:37 IST
ಮಂಗಳೂರು, ಮಾ.10: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಾಮಂಜೂರಿನ ಧರ್ಮಜ್ಯೋತಿ ಸಮಾಜ ಸೇವಾ ಕೇಂದ್ರದ ಜಂಟಿ ಸಹಯೋಗದಲ್ಲಿ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ದ.ಕ. ಜಿಲ್ಲೆಯ ಆಯ್ದ ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ 'ಮಹಿಳೆ ಮತ್ತು ವಿಜ್ಞಾನ' ಕಾರ್ಯಕ್ರಮ ನಡೆಯಿತು.
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ. ರಾವ್ ಮಾತನಾಡಿ ಮಹಿಳೆಯರು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಂಡು ತಮ್ಮ ಮಕ್ಕಳಿಗೆ ಪ್ರಶ್ನೆ ಕೇಳುವ ಗುಣಗಳನ್ನು ರೂಢಿಸಿಕೊಳ್ಳಲು ಪ್ರೇರೇಪಿಸಬೇಕು ಎಂದರು.
ವಾಮಂಜೂರಿನ ಧರ್ಮಜ್ಯೋತಿ ಸಮಾಜ ಸೇವಾ ಕೇಂದ್ರದ ಸಿಸ್ಟರ್ ರೀಮಾ, ನಿರ್ದೇಶಕಿ ಸಿಸ್ಟರ್ ಜೊಯೆಲ್, ಕಾರ್ಯಕ್ರಮ ಸಮನ್ವಯ ಅಧಿಕಾರಿ ನಾಗೇಂದ್ರ ರಾವ್ ಉಪಸ್ಥಿತರಿದ್ದರು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯುರೇಟರ್ ಜಗನ್ನಾಥ ಕಾರ್ಯಕ್ರಮ ನಿರೂಪಿಸಿದರು.