×
Ad

ಮಾ.14ರಂದು ಸುರತ್ಕಲ್‌ನಲ್ಲಿ 'ಕಾಂಗ್ರೆಸ್ ನಡಿಗೆ ಸುರಾಜ್ಯದ ಕಡೆಗೆ' ಕಾರ್ಯಕ್ರಮ

Update: 2017-03-10 19:55 IST

ಮಂಗಳೂರು.ಮಾ,10:ಮಂಗಳೂರು ವಿಧಾನ ಸಭಾ ವ್ಯಾಪ್ತಿಯ ಸುರತ್ಕಲ್‌ನಲ್ಲಿ ಮಾರ್ಚ್ 14ರಂದು 'ಕಾಂಗ್ರೆಸ್ ನಡಿಗೆ ಸುರಾಜ್ಯದ ಕಡೆಗೆ ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ರಾಜ್ಯದ ಪ್ರಮುಖ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದು ಶಾಸಕ ಮೊಯ್ದಿನ್ ಬಾವ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಸಮಾರಂಭ ಮಂಗಳವಾರ ಬೆಳಗ್ಗಿನಿಂದ ಸಂಜೆ 6 ಗಂಟೆಯವರೆಗೆ ಸುರತ್ಕಲ್‌ನ ಬಂಟರ ಭವನದಲ್ಲಿ ನಡೆಯಲಿದೆ. ಈ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸದ್ದಾರೆ.

ಸಮಾರಂಭದಲ್ಲಿ ರಾಜ್ಯದ ಕಾಂಗ್ರೆಸ್ ಮುಖಂಡ ಉಗ್ರಪ್ಪ,ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆಯ ಸಚಿವ ಯು.ಟಿ.ಖಾದರ್,ಮಾಜಿ ಸಚಿವ,ಹಾಗೂ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಅಭಯ ಚಂದ್ರ ಜೈನ್,ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ,ಮುಖ್ಯ ಸಚೇತಕ ಐವನ್ ಡಿ ಸೋಜ,ಶಾಸಕಿ ಶಕುಂತಳಾ ಶೆಟ್ಟಿ ಮತ್ತು ಕಾಂಗ್ರೆಸ್ ಮುಖಂಡರಾದ ಡಾ.ನಾಗಲಕ್ಷ್ಮೀ ,ಆರತಿ ಕೃಷ್ಣಮತ್ತಿತರರು ಭಾಗವಹಿಸಲಿದ್ದಾರೆ.

ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ದೇಶದ ಅಭಿವೃದ್ಧಿಗೆ ನೀಡಿರುವ ಕೊಡುಗೆ.ಜನಸಾಮಾನ್ಯರ ಬದುಕಿನಲ್ಲಾಗಿರುವ ಪ್ರಗತಿಪರ ಬದಲಾವಣೆಗಳ ಬಗ್ಗೆ ಈಗಿನ ಯುವ ಪೀಳಿಗೆಗೆ ನೆನಪಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರ ಮವನ್ನು ಹಮ್ಮಿಕೊಳ್ಳಲಾಗಿದೆ.

ದಿವಂಗತ ಇಂದಿರಾ ಗಾಂಧಿ ಯವರು ಪ್ರಧಾನಿಯಾಗಿದ್ದಾಗ ಬಡವರಿಗಾಗಿ ಹಮ್ಮಿಕೊಂಡ ಅಭಿವೃದ್ಧಿ ಪರ ಕ್ರಾಂತಿಕಾರಿ ಯೋಜನೆಗಳು, 20ಅಂಶಗಳ ಕಾರ್ಯಕ್ರಮಗಳು, ಬ್ಯಾಂಕುಗಳ ರಾಷ್ಟ್ರೀಕರಣ ಯೋಜನೆ, ಊಳುವವನೆ ಹೊಲದೊಡೆಯ ಎಂಬ ಘೋಷಣೆಯೊಂದಿಗೆ ಜಾರಿಗೆ ತಂದ ಭೂಸುಧಾರಣಾ ಯೋಜನೆಗಳ ಬಗ್ಗೆ ಇಂದಿನ ಯುವಕರಿಗೆ ಮನವರಿಕೆ ಮಾಡಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇದೇ ಸಂದರ್ಭದಲ್ಲಿ ದೇಶದಲ್ಲಿ ಪ್ರಧಾನಿ ಮೋದಿ ಆಡಳಿತದ ನೀತಿಯಿಂದ ಬಳಿಕ ನೋಟು ಅಮಾನ್ಯಗೊಳಿಸಿದ ಪರಿಣಾ ಮವಾಗಿ ದೇಶದ ಬಡಜನರು ಪಡುತ್ತಿರುವ ಬವಣೆಯ ಬಗ್ಗೆ ಇದೇ ಸಂದರ್ಭದಲ್ಲಿ ಱಜನರ ವೇದನೆ ೞಯ ಸಮಾವೇಶವವನ್ನು ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭಾಗವಹಿಸಲಿದ್ದಾರೆ ಎಂದು ಶಾಸಕ ಮೊಯ್ದಿನ್ ಬಾವ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಮುಖಂಡರಾದ ಪುರುಷೋತ್ತಮ ಚಿತ್ರಾಪುರ,ಸ್ಟಾನಿ ಅಲ್ವಾರೀಸ,ಕೃಷ್ಣ ಅಮೀನ್,ಸುನಿಲ್ ಗಂಜಿ ಮಠ,ಶಕುಂತಳಾ ಕಾಮತ್,ಮಹಮ್ಮದ್,ಹರೀಶ್,ಹಿರಣ್ಯಾಕ್ಷ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News