×
Ad

ಶಿವಮೊಗ್ಗ: ಪ್ಲಾಸ್ಟಿಕ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ

Update: 2017-03-10 22:58 IST

ಶಿವಮೊಗ್ಗ, ಮಾ.10: ನಗರದ ಮಂಡ್ಲಿಯಲ್ಲಿನ ಕೈಗಾರಿಕಾ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ರೀ ಸೈಕ್ಲಿಂಗ್ ಕಾರ್ಖಾನೆಯಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಇಬಾ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಮರು ಬಳಕೆಗೆ ತರಲಾಗಿದ್ದ ಪ್ಲಾಸ್ಟಿಕ್ ವಸ್ತುಗಳು, ಎರಡು ಯಂತ್ರೋಪಕರಣಗಳು ಸೇರಿದಂತೆ ಹಲವು ವಸ್ತುಗಳು ಬೆಂಕಿಯಿಂದ ಹಾನಿಗೀಡಾಗಿವೆ.

ಸರಿಸುಮಾರು 4.50 ಲಕ್ಷ ರೂ. ನಷ್ಟವಾಗಿರುವುದಾಗಿ ಅಂದಾಜು ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದ್ದು, ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News