×
Ad

​‘ರಸ್ತೆ ಅಪಘಾತಗಳಲ್ಲಿ ಭಾರತಕ್ಕೆ ಮೊದಲ ಸ್ಥಾನ’

Update: 2017-03-10 23:06 IST

ಚಿಕ್ಕಮಗಳೂರು, ಮಾ.10: ವಾಹನ ಚಾಲಕರು ತಮ್ಮ ಮನೆಯಲ್ಲಿ ಹೆಂಡತಿ ಮಕ್ಕಳು, ಹೆತ್ತವರು ತಮಗಾಗಿ ಕಾದಿರುತ್ತಾರೆ ಎಂಬುವುದನ್ನು ಸದಾ ನೆನಪಿನಲ್ಲಿಟ್ಟುಕೊಂಡು ವಾಹನ ಚಲಾಯಿಸಬೇಕು ಎಂದು ಸಾರಿಗೆ ಇಲಾಖೆಯ ಅಪರ ಆಯುಕ್ತ ಸಿ.ಪಿ ನಾರಾಯಣ ಸ್ವಾಮಿ ಹೇಳಿದರು.


ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೆೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಆಯೋಜಿಸಿದ್ದ 28ನೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಪ್ರತೀ ವರ್ಷ 5 ಲಕ್ಷ ಅಪಘಾತಗಳು ಸಂಭವಿಸಿ 1 ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ. ಪ್ರತೀ ಗಂಟೆಗೆ 57 ಅಪಘಾತಗಳಿಂದ 17ಡಿ ಜನ ಸಾಯುತ್ತಿದ್ದಾರೆ.

ರಾಜ್ಯದಲ್ಲಿ ಕಳೆದ ವರ್ಷ 45 ಸಾವಿರ ಅಪಘಾತಗಳು ನಡೆದಿದ್ದು, 11 ಸಾವಿರ ಜನ ಸಾವನ್ನಪ್ಪಿದ್ದಾರೆ, ಇದರಲ್ಲಿ ಯುವ ಜನತೆಯ ಸಾವಿನ ಸಂಖ್ಯೆ ಹೆಚ್ಚಿದೆ ಎಂದು ವಿಷಾದಿಸಿದರು.


 ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವರಾಜ್ ಬಿ. ಪಾಟೀಲ್ ಮಾತನಾಡಿ, ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ 7 ದಿನಗಳ ಕಾಲ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಚಿತ್ರ ಬಿಡಿಸುವ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರಸ್ತೆಗಳಲ್ಲಿ ಪ್ರಾತ್ಯಕ್ಷಿಕೆ ನಡೆಸಲಾಗಿದೆ ಎಂದು ಹೇಳಿದರು.


ರಸ್ತೆ ಸುರಕ್ಷತೆ ಕುರಿತು ಡಿ.ಬಿ.ಸುಜೇಂದ್ರ ಉಪನ್ಯಾಸ ನೀಡಿದರು. ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆಯಿಂದ ಹೊರತರಲಾದ ಕೈಪಿಡಿ ಹಾಗೂ ಕೇಂದ್ರ ಸರಕಾರದ ಸಾರಿಗೆ ಮಂತ್ರಾಲಯ ಹೊರ ತಂದಿರುವ ಸಿ.ಡಿ ಯನ್ನು ವಾರ್ತಾ ಇಲಾಖೆಯ ಸಹಾಯಕ ವಾರ್ತಾಧಿಕಾರಿ ಬಿ. ಮಂಜುನಾಥ್ ಬಿಡುಗಡೆ ಗೊಳಿಸಿದರು. ಸಪ್ತಾಹದ ಅಂಗವಾಗಿ ನಡೆಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ವೌಂಟ್‌ನ್‌ವ್ಯೆ ಶಾಲೆಯ ಪ್ರಾಂಶುಪಾಲೆ ಪ್ರೇಮಲತಾ, ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ಶಣ್ಮುಖ ಉಪಸ್ಥಿತರಿದ್ದರು. ಸಾರಿಗೆ ಇಲಾಖೆಯ ಅಧೀಕ್ಷಕ ರಾಮಚಂದ್ರಪ್ಪ ಸ್ವಾಗತಿಸಿದರು, ಅಧಿಕಾರಿ ಸಂತೋಷ್ ಕಾರ್ಯಕ್ರಮವನ್ನು ನಿರೂಪಿಸಿದರು, ಗಣಪತಿ ಶೇಟ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News