×
Ad

ಮಂಗಳೂರು: ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದ 6 ಬೋಟ್ ವಶ

Update: 2017-03-11 23:19 IST

ಮಂಗಳೂರು, ಮಾ.11: ನಗರದ ಹೊರವಲಯದ ಮರವೂರು ಸೇತುವೆ ಬಳಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಮರಳುಗಾರಿಕೆ ನಿರತ 6 ಬೋಟ್‌ಗಳನ್ನು ಕಾವೂರು ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಶನಿವಾರ ಬೆಳಗ್ಗೆ ಪೊಲೀಸರ ತಂಡ ದಾಳಿ ನಡೆಸಿ ಎರಡು ಲೋಡ್ ಮರಳು ವಶಕ್ಕೆ ಪಡೆದಿದೆ. ಈ ಭಾಗದಲ್ಲಿ ನಿರಂತರವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಈ ಹಿಂದಿನಿಂದಲೂ ದೂರುಗಳು ಕೇಳಿ ಬಂದಿತ್ತು.

ಐದು ಮಂದಿ ಬೋಟ್ ಮಾಲಕರ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News