ನ್ಯಾಯಾಧೀಶರ ವಸತಿ ಸಂಕೀರ್ಣಕ್ಕೆ ಶಿಲಾನ್ಯಾಸ

Update: 2017-03-11 18:22 GMT

ಬಂಟ್ವಾಳ, ಮಾ.11: ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ನ್ಯಾಯಾಂಗ ಇಲಾಖೆ ವತಿಯಿಂದ ನಿರ್ಮಿಸಲಾಗುವ ನ್ಯಾಯಾಧೀಶರ ವಸತಿ ಸಂಕೀರ್ಣಕ್ಕೆ ಬಿ.ಸಿ.ರೋಡ್ ಬಿ.ಮೂಡ ಪರ್ಲಿಯಾ ಬಳಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್ ನ್ಯಾಯಾೀಶ ಜಸ್ಟೀಸ್ ಎಸ್.ಅಬ್ದುಲ್ ನಝೀರ್ ನೆರವೇರಿಸಿದರು.

ಈ ಸಂದರ್ಭ ಹೆದ್ದಾರಿಯಿಂದ ಸುಮಾರು 2ರಿಂದ 3 ಕಿ.ಮೀ. ದೂರದ ಪರಿಸರದಲ್ಲಿ ಸೂಕ್ತವಾದ 3ರಿಂದ 5ಎಕರೆ ಜಾಗವನ್ನು ಗುರುತಿಸಿ, ಅಲ್ಲಿ ಕೋರ್ಟ್ ಕಾಂಪ್ಲೆಕ್ಸ್ ನಿರ್ಮಿಸಲು ಅವಕಾಶ ಕಲ್ಪಿಸುವಂತೆ ಅವರು ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಸೂಚಿಸಿದರು.

ಹೈಕೋರ್ಟ್ ನ್ಯಾಯಾೀಶ ಹಾಗೂ ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಜಸ್ಟೀಸ್ ಎ.ಎನ್.ವೇಣುಗೋಪಾಲ್ ಗೌಡ, ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ, ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭಾಗವಹಿಸಿದ್ದರು.

ದ.ಕ. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್.ಬೀಳಗಿ, ಹಿರಿಯ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ಯು, ಪ್ರ.ಸಿವಿಲ್ ನ್ಯಾಯಾಧೀಶ ಮಹೇಶ್ ಆರ್, ಮ್ಯಾಜಿಸ್ಟ್ರೇಟ್ ಪ್ರತಿಭಾ ಡಿ.ಎಸ್., ಬಂಟ್ವಾಳ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಲೋಕೋಪಯೋಗಿ ಎಕ್ಸಿಕ್ಯುಟಿವ್ ಇಂಜಿನಿಯರ್ ಗಣೇಶ್ ಆರ್.ಅರಳೀಕಟ್ಟಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ವಕೀಲರ ಸಂಘದ ಅಧ್ಯಕ್ಷ ಬಿ.ವಿ.ಶೆಣೈ, ಕಾರ್ಯದರ್ಶಿ ರಾಜಾರಾಮ ನಾಯಕ್, ಪುರಸಭಾ ಮುಖ್ಯಾಕಾರಿ ಎಂ.ಎಚ್.ಸುಧಾಕರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News