×
Ad

ವೈಟ್‌ಹೌಸ್‌ಗೆ ಅಕ್ರಮ ಪ್ರವೇಶ: ವ್ಯಕ್ತಿಯ ಬಂಧನ

Update: 2017-03-12 00:09 IST

 ವಾಷಿಂಗ್ಟನ್, ಮಾ.11: ಅಮೆರಿಕದ ಅಧ್ಯಕ್ಷರ ಅಧಿಕೃತ ನಿವಾಸ ವೈಟ್‌ಹೌಸ್‌ಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಗುಪ್ತಚರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಮಧ್ಯರಾತ್ರಿ ವೇಳೆ ಈ ಘಟನೆ ನಡೆದಿದ್ದು ಈ ಸಂದರ್ಭ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕಟ್ಟಡದ ಒಳಗಿದ್ದರು ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಅತಿಕ್ರಮ ಪ್ರವೇಶ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದ್ದು ಆತನ ಬಳಿಯಿದ್ದ ಬೆನ್ನುಚೀಲದಲ್ಲಿ ಯಾವುದೇ ಅಪಾಯಕಾರಿ ವಸ್ತುಗಳಿರಲಿಲ್ಲ . ಘಟನೆಯ ಬಗ್ಗೆ ಟ್ರಂಪ್ ಮತ್ತು ರಾಷ್ಟ್ರೀಯ ಭದ್ರತಾ ಕಾರ್ಯದರ್ಶಿ ಜಾನ್ ಕೆಲ್ಲಿಯವರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News