ಮಾ.16ರಂದು ಪಂಜಾಬ್ ಮುಖ್ಯಮಂತ್ರಿಯಾಗಿ ಅಮರಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ

Update: 2017-03-12 09:36 GMT

ಹೊಸದಿಲ್ಲಿ,ಮಾ.12: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಕ್ಯಾ.ಅಮರಿಂದರ್ ಸಿಂಗ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಾ.16ರಂದು ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರವಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ತನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಿ ರಾಜ್ಯಕ್ಕೆ ಎಲ್ಲ ಅಗತ್ಯ ನೆರವನ್ನು ಒದಗಿಸುವ ಭರವಸೆಯನ್ನು ನೀಡಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷವು 117 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 77 ಸ್ಥಾನಗಳನ್ನು ಗೆದ್ದಿದ್ದು, ಈ ಗೆಲುವಿನ ಹೆಚ್ಚಿನ ಹೆಗ್ಗಳಿಕೆ ಅಮರಿಂದರ್‌ದ್ದಾಗಿದೆ.

ರಾಜ್ಯದಲಿ ಡ್ರಗ್ ಮಾಫಿಯಾ ನಡೆಸುತ್ತಿರುವ ಆರೋಪ ಹೊತ್ತಿರುವ ಬಿಕ್ರಮ್ ಮಝಿಥಾ ವಿರುದ್ಧ ಕ್ರಮ ಕೈಗೊಳಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನೂತನ ಸರಕಾರವು ಯಾವುದೇ ಪ್ರತೀಕಾರ ರಾಜಕೀಯದಲ್ಲಿ ತೊಡಗುವುದಿಲ್ಲ. ತನಿಖೆಯಲ್ಲಿ ಹೆಸರುಗಳು ಹೊರಬಿದ್ದರೆ ನಾವು ಪರಿಶೀಲಿಸುತ್ತೇವೆ ಎಂದು ಹೇಳಿದರು.

ಪಂಜಾಬ್ ಮಾದಕ ದ್ರವ್ಯ ಪಿಡುಗಿನ ಗಂಭೀರ ಸಮಸ್ಯೆಯ ಸುಳಿಯಲ್ಲಿ ಸಿಲುಕಿದೆ.

ಮಾದಕ ದ್ರವ್ಯ ಪಿಡುಗಿನ ವಿರುದ್ಧ ಹೋರಾಟದಲ್ಲಿ ಮನೋಶಾಸ್ತ್ರಜ್ಞರೂ ಅಗತ್ಯವಾಗಿದ್ದಾರೆ. ಆರೋಗ್ಯ ಮತ್ತು ಶಿಕ್ಷಣ ಇವು ಪ್ರಮುಖ ಆದ್ಯತೆಯ ಕ್ಷೇತ್ರಗಳಾಗಿವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News