×
Ad

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಬಾದಲ್ ರಾಜೀನಾಮೆ

Update: 2017-03-12 15:35 IST

ಚಂಡಿಗಡ,ಮಾ.12: ವಿಧಾನಸಭಾ ಚುನಾವಣೆಯಲ್ಲಿ ತನ್ನ ಶಿರೋಮಣಿ ಅಕಾಲಿ ದಳವು ಸೋಲನ್ನಪ್ಪಿರುವ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ ಸಿಂಗ್ ಬಾದಲ್(89) ಅವರು ರವಿವಾರ ತನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಬಾದಲ್ ನೇತೃತ್ವದಲ್ಲಿ ಬೆಳಿಗ್ಗೆ ಕೊನೆಯ ಬಾರಿಗೆ ಸಭೆ ಸೇರಿದ ಪಂಜಾಬ್ ಸಂಪುಟವು ವಿಧಾನಸಭೆಯ ವಿಸರ್ಜನೆಗೆ ಶಿಫಾರಸು ಮಾಡುವ ಮೂಲಕ ನೂತನ ವಿಧಾನಸಭೆ ರಚನೆಗೆ ಮಾರ್ಗವನ್ನು ಸುಗಮಗೊಳಿಸಿತು.

ಬಾದಲ್ ಅವರು ಉಪ ಮುಖ್ಯಮಂತ್ರಿ ಹಾಗೂ ತನ್ನ ಪುತ್ರ ಸುಖಬೀರ್ ಸಿಂಗ್ ಬಾದಲ್ ಅವರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಬಾದಲ್ ಅವರು ಲಾಂಬಿ ಕ್ಷೇತ್ರದಲ್ಲಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ಅವರನ್ನು ಸೋಲಿಸಿದ್ದು, ಮತ್ತೊಮ್ಮೆ ವಿಧಾನಸಭೆಯನ್ನು ಪ್ರವೇಶಿಸಲಿದ್ದಾರೆ. ಅಮರಿಂದರ್ ಲಾಂಬಿಯಲ್ಲಿ ಸೋತರೂ ಪಟಿಯಾಲಾದಲ್ಲಿ ಗೆಲುವು ಸಾಧಿಸಿದ್ದಾರೆ.

ಪಂಜಾಬ್‌ನಲ್ಲಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದಿದ್ದರೆ, ಆಪ್ 20 ಮತ್ತು ಶಿರೋಮಣಿ ಅಕಾಲಿದಳ-ಬಿಜೆಪಿ ಮೈತ್ರಿಕೂಟ ಕೇವಲ 18 ಸ್ಥಾನಗಳನ್ನು ಗೆದ್ದಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News