4 ಟಿಎಂಸಿ ನೀರು ಬಿಡುಗಡೆಗೆ ಮಹಾರಾಷ್ಟ್ರಕ್ಕೆ ಸಿಎಂ ಪತ್ರ

Update: 2017-03-12 14:15 GMT

ಬೆಂಗಳೂರು, ಮಾ. 12: ರಾಜ್ಯದಲ್ಲಿನ ಭೀಕರ ಸ್ವರೂಪದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕದ ಕೃಷ್ಣ ಮತ್ತು ಭೀಮಾ ಜಲಾನಯನ ಪ್ರದೇಶಕ್ಕೆ 4 ಟಿಎಂಸಿ ನೀರು ಬಿಡುಗಡೆ ಮಾಡಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಈ ಸಂಬಂಧ ಮಾ.9ರಂದು ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ 176 ತಾಲೂಕುಗಳ ಪೈಕಿ 160 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಮಾನವೀಯ ದೃಷ್ಟಿಯಿಂದ ಕೂಡಲೇ ನೀರು ಬಿಡುಗಡೆ ಮಾಡಬೇಕೆಂದು ಕೋರಿದ್ದಾರೆ.

ಧೂದ್ ಗಂಗಾದಿಂದ 2 ಟಿಎಂಸಿ, ವೇಧ್ ಗಂಗಾದಿಂದ 1 ಟಿಎಂಸಿ ಹಾಗೂ ಭೀಮಾ ನದಿಯಿಂದ 1 ಟಿಎಂಸಿ ಸೇರಿದಂತೆ ಒಟ್ಟು ನಾಲ್ಕು ಟಿಎಂಸಿ ನೀರನ್ನು ಕರ್ನಾಟಕ ರಾಜ್ಯದ ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶಕ್ಕೆ ಬಿಡುಗಡೆ ಮಾಡಬೇಕು ಎಂದು ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News