ರಾಜ್ಯಪಾಲರಿಂದಲೇ ಕುದುರೆ ವ್ಯಾಪಾರಕ್ಕೆ ಕುಮ್ಮಕ್ಕು : ಡಿ.ಕೆ.ಶಿವಕುಮಾರ್

Update: 2017-03-13 06:37 GMT

ಬೆಂಗಳೂರು, ಮಾ.13: ಗೋವಾದಲ್ಲಿ  ರಾಜ್ಯಪಾಲರು ಬಿಜೆಪಿಗೆ ಬಹುಮತ ತೋರಿಸಲು 15 ದಿನಗಳ ಕಾಲಾವಕಾಶ ನೀಡಿದ್ದಾರೆ. ಅಲ್ಲಿ ರಾಜ್ಯಪಾಲರು ಕುದುರೆ ವ್ಯಾಪಾರ ಮಾಡುವುದಕ್ಕೆ ಅವಕಾಶ ನೀಡಿದಂತಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಪಂಚರಾಜ್ಯ ಚುನಾವಣೆ ಫಲಿತಾಂಶ ಹಿನ್ನೆಲೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಗೋವಾದಲ್ಲಿ ಜನ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದಾರೆ. ಆದರೆ, ಗೋವಾದಲ್ಲಿ ರಾಜ್ಯಪಾಲರು ಅಧಿಕಾರ ದುರುಪಯೋಗ ಮಾಡುತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ನಡೆಯುತ್ತಿದ್ದಾರೆ. ಅವರು ಬಿಜೆಪಿ ಪಕ್ಷದ ಕಾರ್ಯಕರ್ತರಂತೆ ಕೆಲಸ ಮಾಡುತ್ತಿದ್ದಾರೆ. ಗೋವಾ ರಾಜ್ಯಪಾಲರು ಅಧಿಕಾರ ರಚನೆಗೆ ಬಹುಮತ ತೋರಿಸಲು 15 ದಿನಗಳ ಸಮಯ ಕೊಟ್ಟಿದ್ದಾರೆ. ಇದು ಖುದ್ದಾಗಿ ರಾಜ್ಯಪಾಲರೇ ಕುದುರೆ ವ್ಯಾಪಾರಕ್ಕೆ  ಆಹ್ವಾನ ನೀಡಿದಂತಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಉತ್ತರಭಾರತಕ್ಕೂ‌ ದಕ್ಷಿಣ ಭಾರತಕ್ಕೂ ವ್ಯತ್ಯಾಸವಿದೆ. ಉತ್ತರ ಭಾರತದಲ್ಲಿ ಬಿಜೆಪಿ ಆಡಳಿತ ನೋಡಿರಲಿಲ್ಲ. ಯುಪಿಯಲ್ಲಿ ಜನ ಬದಲಾವಣೆ ಬಯಸಿದ್ದಾರೆ ಹಾಗಾಗಿ ಅಲ್ಲಿ ಬಿಜೆಪಿ ಗೆದ್ದಿದೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News