ಪರೀಕ್ಷೆ ಆರಂಭವಾದ ನಂತರ ಅಕೌಂಟೆನ್ಸಿ ಪ್ರಶ್ನೆ ಪತ್ರಿಕೆ ವಾಟ್ಸಾಪ್‌ನಲ್ಲಿ !

Update: 2017-03-13 14:01 GMT

ಬೆಂಗಳೂರು, ಮಾ.13: ದ್ವಿತೀಯ ಪಿಯು ಲೆಕ್ಕಶಾಸ್ತ್ರ ಪ್ರಶ್ನೆ ಪತ್ರಿಕೆ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆಯ ಮಾನ್ವಿ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ರಾಯಚೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಚೇತನ್‌ಸಿಂಗ್ ರಾಥೋಡ್ ನೇತೃತ್ವದಲ್ಲಿ ಕಾಲೇಜಿನ ಪ್ರಾಂಶುಪಾಲ, ಉಪನ್ಯಾಸಕ ಹಾಗೂ ನಿರ್ದೇಶಕರನ್ನು ವಶಕ್ಕೆ ತೆಗೆದುಕೊಂಡು ಮಾನ್ವಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಮಾನ್ವಿ ತಾಲೂಕಿನ ಕಲ್ಮಠ ಕಾಲೇಜಿನ ಉಪನ್ಯಾಸಕ ಸಿದ್ದನಗೌಡ, ಕಳಿಂಗ ಪಿಯು ಕಾಲೇಜಿನ ಪ್ರಾಂಶುಪಾಲ ಮಹೇಶ್ ಹಾಗೂ ನಿರ್ದೇಶಕ ಶರಣಬಸವ ಬೆಟದೂರ ರನ್ನು ವಶಕ್ಕೆ ಪೊಲೀಸರು ವಶಕ್ಕೆ ತೆಗೆದುಕೊಂಡು, ವಿಚಾರಣೆ ನಡೆಸುತ್ತಿದ್ದಾರೆ.

ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ ಅಕ್ರಮವಾಗಿ ಪರೀಕ್ಷಾ ಕೇಂದ್ರ ಪ್ರವೇಶಿಸಿದ್ದ ಸಿದ್ದನಗೌಡ, ತನ್ನ ಮೊಬೈಲ್‌ನಲ್ಲಿ ಪ್ರಶ್ನೆಪತ್ರಿಕೆಯ ಫೋಟೋವನ್ನು ತೆಗೆದು ಕಳುಹಿಸಿರುವುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿರುವುದಾಗಿ ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News