×
Ad

ಮೇವು ಬ್ಯಾಂಕ್ ಸ್ಥಾಪನೆ ಪ್ರತಿ ತಾಲೂಕಿಗೆ ತಲಾ 20 ಲಕ್ಷ ರೂ. ಬಿಡುಗಡೆ :

Update: 2017-03-13 23:06 IST

ಮಡಿಕೇರಿ, ಮಾ.13 : ಬೇಸಿಗೆ ಅವಧಿಯಲ್ಲಿ ಜಾನುವಾರುಗಳಿಗೆ ಸಮರ್ಪಕವಾಗಿ ಮೇವು ಪೂರೈಕೆ ಮಾಡಲು ಪ್ರತೀ ತಾಲೂಕಿನಲ್ಲಿ ಮೇವು ಬ್ಯಾಂಕ್ ಸ್ಥಾಪನೆಗೆ ಈಗಾಗಲೇ ತಲಾ 20 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಎ.ಮಂಜು ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿ ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನೆ ಸಂಬಂಧ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ವೀಡಿಯೊ ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಜಾನುವಾರುಗಳಿಗೆ ನೀರು ಮತ್ತು ಮೇವು ಒದಗಿಸುವ ನಿಟ್ಟಿನಲ್ಲಿ ಸರಕಾರದ ವತಿಯಿಂದ ಈಗಾಗಲೇ ಸಾಕಷ್ಟು ಮುಂಜಾಗ್ರತೆ ವಹಿಸಲಾಗಿದೆ. ಆದರೂ, ಚಾಮರಾಜನಗರ, ಮೈಸೂರು, ಹಾಸನ, ಬೀದರ್, ಗದಗ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಹೀಗೆ ನಾನಾ ಜಿಲ್ಲೆಗಳಲ್ಲಿ ಮೇವಿನ ಕೊರತೆ ಇರುವುದು ಕಂಡುಬಂದಿದೆ. ಜಾನುವಾರುಗಳಿಗೂ ಮೇವಿನ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ತಾಲೂಕುಗಳಲ್ಲಿ ಮೇವು ಬ್ಯಾಂಕ್ ಸ್ಥಾಪನೆಗೆ ಮುಂದಾಗಿರುವುದಾಗಿ ಸಚಿವರು ತಿಳಿಸಿದರು. ಾಲು ಉತ್ಪಾದಕರಿಗೆ ಹೆಚ್ಚಿನ ಫ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರಕಾರ ಬದ್ಧವಾಗಿದೆ. ಹಾಲಿನ ದರ ಹೆಚ್ಚಳ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ.

ಈ ಸಂಬಂಧ ಈಗಾಗಲೇ ಒಂದು ಸಭೆ ನಡೆದಿದ್ದು, ಮತ್ತೊಂದು ಸಭೆಯನ್ನು ಸದ್ಯದಲ್ಲೇ ಆಹ್ವಾನಿಸಲಾಗುವುದು. ಸರಕಾರ ರೈತರ ಸಂಕ   ನಿವಾರಣೆಗೆ ಸದಾ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಮುಂದಿನ ಸಭೆಯಲ್ಲಿ ಹಾಲಿನ ದರ ನಿರ್ಧರಿಸಲಾಗುವುದು.

ಸರಕಾರದಿಂದ ಈಗಾಗಲೇ ಪ್ರತಿ ಲೀಟರ್ ಹಾಲಿಗೆ 5 ರೂ. ಫ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದರು. ಜಾನುವಾರುಗಳಿಗೆ ನೀರು ಕುಡಿಯಲು ಅನುಕೂಲವಾಗುವಂತೆ ಪ್ರತೀ ಹಳ್ಳಿಗಳಲ್ಲೂ ನೀರಿನ ತೊಟ್ಟಿಯನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಇದೇ ವೇಳೆ ಸಚಿವ ಮಂಜು ತಿಳಿಸಿದರು. ಪ್ರಗತಿ ಪರಿಶೀಲನೆ

ಇದಕ್ಕೂ ಮೊದಲು ಪಶುಪಾಲನಾ ಇಲಾಖೆಯ ಪ್ರಗತಿ ಪರಿಶೀಲನೆಯನ್ನು ವೀಡಿಯೊ ಸಂವಾದ ಮೂಲಕ ನಡೆಸಿದ ಸಚಿವ ಎ.ಮಂಜು ಅವರು, ಇಲಾಖೆಯ ಕಾರ್ಯಕ್ರಮಗಳಾದ ಪಶುಭಾಗ್ಯ ಯೋಜನೆ ಅನುಷ್ಠಾನ, ವಿಶೇಷ ಅಭಿವೃದ್ಧಿ ಯೋಜನೆ, ಹೈನುಗಾರಿಕೆ, ಅಮೃತ ಯೋಜನೆ, ಕುರಿ ಮೇಕೆ, ಹಂದಿ ಮತ್ತು ಕೋಳಿ ಸಾಕಣೆ ಸಂಬಂಧ ಪ್ರಗತಿ ಪರಿಶೀಲನೆ ನಡೆಸಿದರು. ಕೆಲವು ಜಿಲ್ಲೆಗಳಲ್ಲಿ ಬೌದ್ಧಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸದಿರುವುದಕ್ಕೆ ಸಚಿವರು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಈಗಾಗಲೇ ಬೇಸಿಗೆ ಆರಂಭವಾಗಿರುವುದರಿಂದ ಎಲ್ಲಾ ತಾಲೂಕುಗಳಲ್ಲಿ ಮೇವು ಸಂಗ್ರಹಣೆ ಮಾಡಿಕೊಂಡಿರಬೇಕು.

ಎಲ್ಲಾ ಕಡೆಗಳಲ್ಲಿ ಸರಕಾರದ ನಿರ್ದೇಶನದಂತೆ ಜಾನುವಾರುಗಳಿಗೆ ಮೇವು ವಿತರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಮೇವು ಕೊರತೆ ಇದೆ ಎಂಬ ದೂರುಗಳು ಕೇಳಿ ಬರಬಾರದು ಎಂದು ಸಚಿವ ಎ.ಮಂಜು ಅವರು ಸೂಚನೆ ನೀಡಿದರು.

ರೈತರು ಬದುಕಲು ಹೈನುಗಾರಿಕೆ ಉಪಯುಕ್ತವಾಗಿದೆ. ಆ ನಿಟ್ಟಿನಲ್ಲಿ ರೈತರಿಗೆ ಅನುಕೂಲ ಮಾಡಬೇಕು. ಅಧಿಕಾರಿಗಳು ಜಾನುವಾರುಗಳ ರಕ್ಷಣೆ ಮಾಡುವುದು ಮತ್ತು ಪೋಷಣೆ ಮಾಡಲು ಅಗತ್ಯ ಕ್ರಮಕೈಗೊಳ್ಳುವಂತೆ ಸಚಿವರು ಸ್ಪಷ್ಟ ನಿರ್ದೇಶನ ನೀಡಿದರು. ಎಸ್‌ಸಿಪಿ/ಟಿಎಸ್‌ಪಿ ಯೋಜನೆ ಸೇರಿದಂತೆ ಇತರ ಎಲ್ಲಾ ಯೋಜನೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಿ ಪ್ರಗತಿ ಸಾಧಿಸುವಂತೆ ಎ.ಮಂಜು ಅವರು ಸೂಚನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News