×
Ad

ಸಂಚಾರಿ ಆರೋಗ್ಯ ಘಟಕ ಸೇವೆಗೆ ಸಚಿವ ರೈ ಚಾಲನೆ

Update: 2017-03-13 23:08 IST

ಬಂಟ್ವಾಳ, ಮಾ. 13: ಎಂಡೋಸಲ್ಫಾನ್ ಪುನರ್‌ವಸತಿ ಕಾರ್ಯಕ್ರಮದಡಿಯಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ ನಾಲ್ಕು ಸಂಚಾರಿ ಆರೋಗ್ಯ ಘಟಕ ಸೇವೆಯನ್ನು ಸೋಮವಾರ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಬಿ.ಸಿ.ರೋಡಿನಲ್ಲಿ ಚಾಲನೆ ನೀಡಿದರು.

ಈ ಘಟಕವು ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯದ ಬೆಳ್ಳಾರೆ ಮತ್ತು ವಿಟ್ಲ-ಮೂಡಬಿದ್ರೆಯನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯಾಚರಿಸಲಿದೆ. ಈ ಆರೋಗ್ಯ ಘಟಕದಲ್ಲಿ ಫಿಸಿಯೋಥಿರಪಿಸ್ಟ್, ಶುಶ್ರೂಷಕಿ, ಸಹಾಯಕರೊಳಗೊಂಡ ತಂಡ ಫಿಸಿಯೋಥೆರಫಿ ಚಿಕಿತ್ಸೆ ನೀಡಲಿದ್ದು ಪ್ರತೀ ತಿಂಗಳಲ್ಲಿ ಎರಡು ಬಾರಿ ಎಂಡೋಸಲ್ಫಾನ್ ಸಂತ್ರಸ್ಥರ ಮನೆಗೆ ಭೇಟಿ ನೀಡಿ ಚಿಕಿತ್ಸೆ ನೀಡಲಿದೆ ಎಂದು ಸಚಿವ ರಮಾನಾಥ ರೈ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಸರ್ವ ಶಿಕ್ಷಣ ಅಭಿಯಾನದಡಿ ವಿಕಲಚೇತನ ಫಲಾನುಭವಿಗಳಿಗೆ ಗಾಲಿಕುರ್ಚಿ ಸಹಿತ ವಿವಿಧ ಸಲಕರಣೆಗಳನ್ನು ಸಚಿವರು ವಿತರಿಸಿದರು.

ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಆರೋಗ್ಯ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮುಹಮ್ಮದ್, ರವೀಂದ್ರ ಕಂಬಳಿ, ಮಂಜುಳ ಮಾವೆ, ಕಮಲಾಕ್ಷಿ ಪೂಜಾರಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷಿ ಬಂಗೇರ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಆರೋಗ್ಯಾಧಿಕಾರಿ ದೀಪಾ ಪ್ರಭು, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ಡಾ. ಅರುಣ್ ಕುಮಾರ್, ತಹಶೀಲ್ದಾರ್ ಪುರಂದರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

ತಾಪಂ ಇಒ ಸಿಪ್ರಿಯಾನ್ ಮಿರಾಂದ ಸ್ವಾಗತಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News