×
Ad

ಕೇಂದ್ರ ಸರಕಾರದ ವಿರುದ್ಧ ಎಸ್‌ಡಿಪಿಐ ಧರಣಿ

Update: 2017-03-14 18:39 IST

ಮಂಗಳೂರು, ಮಾ.14: ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಜನವಿರೋಧಿ ನೀತಿ ಮತ್ತು ಆಹಾರ ಮತ್ತಿತರ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಎಸ್‌ಡಿಪಿಐ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ಸಮಿತಿಯು ಮಂಗಳವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯ ಮುಂದೆ ಧರಣಿ ನಡೆಸಿತು.

ಎಸ್‌ಡಿಪಿಐ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜಲೀಲ್ ಕೃಷ್ಣಾಪುರ ಮಾತನಾಡಿ, ಕಳೆದ ಚುನಾವಣೆಯ ಸಂದರ್ಭ ನರೇಂದ್ರ ಮೋದಿ ಸಹಿತ ಬಿಜೆಪಿಯ ಪ್ರಮುಖರು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಆಹಾರ ಮತ್ತಿತರ ಸಾಮಗ್ರಿಗಳ ಬೆಲೆ ಏರಿಕೆಯ ವಿರುದ್ಧದ ವಿಚಾರವನ್ನು ಮುಂದಿಟ್ಟು ಬೆಲೆಯನ್ನು ಇಳಿಕೆ ಮಾಡುವುದಾಗಿ ಹೇಳಿದ್ದರು. ಆದರೆ ಅಧಿಕಾರಕ್ಕೇರಿ ಮೂರು ವರ್ಷವಾದರೂ ಕೂಡ ಬೆಲೆಯನ್ನು ಇಳಿಸಲಿಲ್ಲ. ಬದಲಾಗಿ ಎಲ್ಲ ವಸ್ತುಗಳ ಬೆಲೆ ಏರಿಸಿ ಜನರಿಗೆ ಅನ್ಯಾಯ ಎಸಗಿದೆ ಎಂದು ಆಪಾದಿಸಿದರು.

ಧರಣಿಯ ಅಧ್ಯಕ್ಷತೆಯನ್ನು ಕ್ಷೇತ್ರ ಸಮಿತಿಯ ಅಧ್ಯಕ್ಷ ಮುನೀಬ್ ಬೆಂಗರೆ ವಹಿಸಿದ್ದರು. ಪಕ್ಷದ ಕ್ಷೇತ್ರ ಸಮಿತಿಯ ಮುಖಂಡರು ಧರಣಿಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News