×
Ad

ವಾಹನಗಳ ಹರಾಜು

Update: 2017-03-14 19:30 IST

ಮಂಗಳೂರು, ಮಾ.14: ಅಬಕಾರಿ ಇಲಾಖೆಯಿಂದ ಸರಕಾರಕ್ಕೆ ಮುಟ್ಟುಗೋಲು ಹಾಕಿಕೊಂಡು ವಿಲೇವಾರಿಗೆ ಒಳಪಡಿಸಲಾದ ವಿವಿಧ ವಾಹನಗಳನ್ನು ಬಹಿರಂಗ ಹರಾಜು ಮಾಡಲಾಗುವುದು.

ಮಂಗಳೂರು ತಾಲೂಕಿಗೆ ಸಂಬಂಧಿಸಿದ 3 ವಾಹನಗಳನ್ನು ಮಾ.21, ಬಂಟ್ವಾಳ ತಾಲೂಕಿಗೆ ಸಂಬಂಧಿಸಿದ 6 ವಾಹನಗಳನ್ನು ಮಾ.22, ಪುತ್ತೂರು ತಾಲೂಕಿಗೆ ಸಂಬಂಧಿಸಿದ 5 ವಾಹನಗಳನ್ನು ಮಾ.23ರಂದು ಹರಾಜು ನಡೆಸಲಾಗುವುದು.

 ಹರಾಜಿನಲ್ಲಿ ಭಾಗವಹಿಸಲು ಇಚ್ಛಿಸುವ ಸಾರ್ವಜನಿಕರು ಮಾಹಿತಿಗಾಗಿ ಆಯಾ ತಾಲೂಕಿನ ಅಬಕಾರಿ ಉಪ ಅಧೀಕ್ಷಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಬಕಾರಿ ಉಪ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News