ಉ.ಪ್ರ. ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ನ್ಯಾಯಾಂಗ ಬಂಧನ
Update: 2017-03-15 10:59 IST
ಲಕ್ನೋ, ಮಾ. 15: ಅತ್ಯಾಚಾರ ಪ್ರಕರಣದ ಆರೋಪಿ, ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಜಾಪತಿ ಅವರನ್ನು ಇಂದು ಬೆಳಗ್ಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಜಾಪತಿ ಅವರ ಇಬ್ಬರು ಮಕ್ಕಳು ಹಾಗೂ ಮತ್ತೊಬ್ಬ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿತ್ತು.
ಸಮಾಜವಾದಿ ಪಕ್ಷದ ಗಾಯತ್ರಿ ಪ್ರಜಾಪತಿ ಅವರು ಉತ್ತರ ಪ್ರದೇಶದ ಮಾಜಿ ಮುಖ್ಯ ಮಂತ್ರಿ ಅಖಿಲೇಶ್ ಯಾದವ್ ಸಂಪುಟದಲ್ಲಿ ಸಚಿವರಾಗಿದ್ದರು.