ರಾಷ್ಟ್ರಪತಿ ಹುದ್ದೆಗೆ ಅಡ್ವಾಣಿ ಹೆಸರು ಸೂಚಿಸಿದ ಪ್ರಧಾನಿ ಮೋದಿ
Update: 2017-03-15 11:24 IST
ಹೊಸದಿಲ್ಲಿ, ಮಾ.15: ಮಾಜಿ ಉಪ ಪ್ರಧಾನಿ ಹಾಗೂ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರು ಭಾರತದ ರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಫೈನಾನ್ಸಿಯಲ್ ಎಕ್ಸ್ ಪ್ರೆಸ್ ವರದಿ ಮಾಡಿದೆ .
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎಲ್.ಕೆ. ಅಡ್ವಾಣಿ ಅವರನ್ನು ರಾಷ್ಟ್ರಪತಿ ಹುದ್ದೆಗೆ ಪ್ರಸ್ತಾಪ ಮಾಡಿದ್ದಾರೆ.
ಮಾ8ರಂದು ಸೋಮನಾಥದಲ್ಲಿ ನಡೆದ ಸಭೆಯಲ್ಲಿ ಎಲ್.ಕೆ.ಅಡ್ವಾಣಿ ಹೆಸರನ್ನು ರಾಷ್ಟ್ರಪತಿ ಸ್ಥಾನಕ್ಕೆ ತನ್ನ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಇದರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತನ್ನ ಗುರುವಿಗೆ "ಗುರದಕ್ಷಿಣೆ” ಉಡುಗೊರೆ ನೀಡಿದ್ದಾರೆ.
ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಅಧಿಕಾರದ ಅವಧಿ ಮುಂದಿನ ಜುಲೈನಲ್ಲಿ ಕೊನೆಗೊಳ್ಳಲಿದೆ.