ಗ್ರಾಹಕ ಶಿಕ್ಷಣ ಸರ್ಟಿಫಿಕೇಟ್ ಕೋರ್ಸ್: ಕಾವೂರು ಸರಕಾರಿ ಕಾಲೇಜಿಗೆ ಮೆಡಲ್
ಮಂಗಳೂರು, ಮಾ. 15: ಗ್ರಾಹಕರ ಹಕ್ಕುಗಳಿಗೆ ಸಂಬಂಸಿ ದ.ಕ. ಜಿಲ್ಲೆಯ 7 ಶಾಲೆಗಳಲ್ಲಿ ಗ್ರಾಹಕ ಶಿಕ್ಷಣ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ನಡೆಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಕಾವೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ವಿಶೇಷ ಸಾಧನೆಯನ್ನು ಮೆರೆದಿದ್ದಾರೆ.
ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ನಡೆದ ವಿಶ್ವ ಗ್ರಾಹಕ ದಿನಾಚರಣೆಯಲ್ಲಿ ಕಾವೂರು ಕಾಲೇಜಿನ ವಿದ್ಯಾರ್ಥಿನಿ ವಿದ್ಯಾ ಕಲ್ಲಯಯ ಹಿರೇಮಠ್ ಚಿನ್ನದ ಪದಕ ಪಡೆದರೆ, ವಿಠಲ್ ಬೆಳ್ಳಿ ಹಾಗೂ ಪ್ರದೀಪ್ ಕಂಚಿನ ಪದಕ ಪಡೆದರು.
ಇದಲ್ಲದೆ ಕಾಲೇಜು ವಿದ್ಯಾರ್ಥಿಗಳ ತಂಡ ಗ್ರಾಹಕ ಹಕ್ಕುಗಳಿಗೆ ಸಂಬಂಸಿದ ಉತ್ತಮ ಪ್ರಾಜೆಕ್ಟ್ ವರ್ಕ್‌ನಲ್ಲಿಯೂ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಸರ್ಟಿಫಿಕೇಟ್ ಕೋರ್ಸ್ ಪರೀಕ್ಷೆಗೆ 165 ವಿದ್ಯಾರ್ಥಿಗಳು ಹಾಜರಾಗಿ, 148 ಮಂದಿ ಉತ್ತೀರ್ಣರಾಗಿದ್ದಾರೆ.
ಗ್ರಾಹಕ ಹಕ್ಕುಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ದ.ಕ. ಜಿಲ್ಲೆಯ 60 ಪ್ರೌಢಶಾಲೆಗಳಲ್ಲಿ ಈಗಾಗಲೇ ಗ್ರಾಕ ಕ್ಲಬ್‌ಗಳು ಕಾರ್ಯಾಚರಿಸುತ್ತಿವೆ.
ಜಿಲ್ಲಾಡಳಿತದ ವತಿಯಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸಿ್ತ ವಿಜೇತರಿಗೆ ಗೌರವ ನೀಡಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ವೇದಿಕೆಯ ಅಧ್ಯಕ್ಷ ವಿಶ್ವೇಶ್ವರ ಭಟ್ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಕಾರಿ ಡಾ.ಎಂ.ಆರ್. ರವಿ, ಹಿರಿಯ ಸಿವಿಲ್ ನ್ಯಾಯಾೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಕಾರ್ಯದರ್ಶಿ ಮಲ್ಲನಗೌಡ, ಗೋವಿಂದ ದಾಸ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ. ಮುರಳೀಧರ ರಾವ್, ಎಸ್‌ಡಿಎಂ ಬಿಬಿಎಂ ಕಾಲೇಜಿನ ಪ್ರಾಂಶುಪಾಲ ಅರುಣಾ ಪಿ. ಕಾಮತ್, ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾವೂರಿನ ಪ್ರಾಂಶುಪಾಲೆ ಡಾ. ಯು. ತಾರಾ ರಾವ್ ಉಪಸ್ಥಿತರಿದ್ದರು.