×
Ad

ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಎನ್.ಬಿರೇನ್ ಸಿಂಗ್ ಪ್ರಮಾಣವಚನ ಸ್ವೀಕಾರ

Update: 2017-03-15 15:19 IST

ಇಂಫಾಲ,ಮಾ.15: ಬಿಜೆಪಿ ನಾಯಕ ಎನ್.ಬಿರೇನ್ ಸಿಂಗ್ ಅವರು ಬುಧವಾರ ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಕಾಂಗ್ರೆಸಿನ 15 ವರ್ಷಗಳ ಆಡಳಿತಕ್ಕೆ ತೆರೆ ಬಿದ್ದಿದ್ದು, ಇದೇ ಮೊದಲ ಬಾರಿಗೆ ಬಿಜೆಪಿಯು ಅಧಿಕಾರದ ಗದ್ದುಗೆಯನ್ನೇರಿದೆ.

ರಾಜಧಾನಿ ಇಂಫಾಲದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್‌ಪಿಪಿ)ಯ ವೈ.ಜಯಕುಮಾರ್ ಅವರು ಉಪಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕರಿಸಿದರು.ಚುನಾವಣೆಯ ಬಳಿಕ ಮಣಿಪುರದಲ್ಲಿ ತ್ರಿಶಂಕು ವಿಧಾನಸಭೆ ಸೃಷ್ಟಿಯಾಗಿತ್ತು. 60 ಸದಸ್ಯಬಲದ ವಿಧಾನಸಭೆಯಲ್ಲಿ 28 ಸ್ಥಾನಗಳೊಡನೆ ಕಾಂಗ್ರೆಸ್ ಏಕೈಕ ಅತಿದೊಡ್ಡ ಪಕ್ಷವಾಗಿ ಮೂಡಿ ಬಂದಿದ್ದರೆ, ಬಿಜೆಪಿ 21 ಸ್ಥಾನಗಳನ್ನು ಗಳಿಸಿತ್ತು. ಸರಕಾರ ರಚನೆಗೆ ಕನಿಷ್ಠ 31 ಶಾಸಕರ ಬೆಂಬಲ ಅಗತ್ಯವಾಗಿದ್ದು, ಸಣ್ಣಪುಟ್ಟ ಪಕ್ಷಗಳು ಮತ್ತು ಪಕ್ಷೇತರರ ಬೆಂಬಲದೊಂದಿಗೆ ಸರಕಾರ ರಚಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News