ಮಂಗಳೂರು: ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ
Update: 2017-03-15 18:03 IST
ಮಂಗಳೂರು, ಮಾ.15: ನಗರದ ಹಂಪನಕಟ್ಟ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ.
ಹಂಪನಕಟ್ಟೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲಕ ಹಕೀಂ ಎಂಬಾತನಿಗೆ ಬಸ್ಸು ಢಿಕ್ಕಿ ಹೊಡಿದಿದೆ ಎನ್ನಲಾಗಿದೆ.
ಕೆಎಸ್ಸಾರ್ಟಿಸಿ ಬಸ್ಸು ಚಾಲಕನ ಅತೀ ವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ.