ಎಲ್ಲಾ ವರ್ಗದ ಜನರಿಗೆ ಆದ್ಯತೆ: ಸಚಿವ ಬಿ.ರಮಾನಾಥ ರೈ,
Update: 2017-03-15 22:33 IST
ಮಂಗಳೂರು, ಮಾ. 15: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಎಲ್ಲಾ ವರ್ಗದ ಜನರಿಗೆ ಆದ್ಯತೆ ನೀಡಲಾಗಿದೆ ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮತೋಲನ, ಕೃಷಿ, ಕೈಗಾರಿಕೆ ಹಾಗೂ ಪ್ರವಾಸ್ಯೋದ್ಯಮ, ರೈತರು, ಕಾರ್ಮಿಕರು, ಯುವಜನತೆ, ಮಹಿಳೆಯರ ಅಭಿವೃದ್ಧಿಗೆ ಮುಖ್ಯಮಂತ್ರಿಯವರು ಬಜೆಟ್‌ನಲ್ಲಿ ಅಭೂತಪೂರ್ವ ಕೊಡುಗೆಯನ್ನು ನೀಡಿದ್ದಾರೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.