×
Ad

ಕಡಬ: ಸ್ವಿಫ್ಟ್ ಕಾರಿನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ

Update: 2017-03-16 19:29 IST

ಕಡಬ, ಮಾ.16. ಸ್ವಿಫ್ಟ್ ಕಾರಿನಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿದ್ದು, ಹೋರಿಯೊಂದನ್ನು ರಕ್ಷಿಸಿದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಗುರುವಾರ ಮುಂಜಾನೆ ಸುಮಾರು 4 ಗಂಟೆಗೆ ನಡೆದಿದೆ.

ಕಡಬ ಠಾಣಾಧಿಕಾರಿ ಪ್ರಕಾಶ್ ದೇವಾಡಿಗರು ವಾಹನ ತಪಾಸಣೆ ನಡೆಸುತ್ತಿದ್ದಾಗ ಕಡಬ ಕಡೆಯಿಂದ ಆಗಮಿಸಿದ ಕೇರಳ ನೋಂದಣಿಯ ಸ್ವಿಫ್ಟ್ ಕಾರೊಂದು ನಿಲ್ಲಿಸದೆ ಪರಾರಿಯಾಗಲೆತ್ನಿಸಿದ್ದು, ಪೊಲೀಸರು ಹಿಂಬಾಲಿಸಿದಾಗ ನಿಯಂತ್ರಣ ತಪ್ಪಿದ ಕಾರು ಪಕ್ಕದ ಚರಂಡಿಗೆ ಬಿದ್ದಿದ್ದು, ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಡಬ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News