ಹಣ ಬಲದಿಂದ ಸರಕಾರ ರಚಿಸಿದ ಬಿಜೆಪಿ: ರಾಹುಲ್ ಟೀಕೆ
Update: 2017-03-16 19:30 IST
ಚಂಡೀಗಡ, ಮಾ.16: ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿಯು ಜನಾದೇಶವನ್ನು ಕಸಿದುಕೊಳ್ಳುತ್ತಿದ್ದು ಹಣದ ಬಲದಿಂದ ಸರಕಾರ ರಚಿಸಿದೆ ಎಂದು ಕಾಂಗ್ರೆಸ್ ಉಾಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಮಣಿಪುರ ಮತ್ತು ಗೋವಾದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಜನಾದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ದೂರಿದರು.
ಪಂಜಾಬ್ ಮುಖ್ಯಮಂತ್ರಿಯಾಗಿ ಅಮರೀಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡ ಅವರು ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ಪಂಜಾಬಿನಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದ ರಾಜ್ಯದ ಜನತೆಗೆ ಧನ್ಯವಾದ ಸಲ್ಲಿಸಿದ ಅವರು, ಅಮರೀಂದರ್ ಸಿಂಗ್ ಸರಕಾರ ಜನರ ಆಶೋತ್ತರಗಳನ್ನು ಈಡೇರಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.