ಅಡುಗೆ ಅನಿಲ ದರ ಏರಿಕೆ ವಿರುದ್ಧ ಮಹಿಳಾ ಕಾಂಗ್ರೆಸ್‌ನಿಂದ ವಿನೂತನ ಪ್ರತಿಭಟನೆ

Update: 2017-03-17 06:30 GMT

ಮಂಗಳೂರು, ಮಾ.17: ಅಡುಗೆ ಅನಿಲ ದರ ಏರಿಕೆ ಮಾಡಿರುವ ಕೇಂದ್ರ ಸರಕಾರದ ವಿರುದ್ಧ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಶುಕ್ರವಾರ ವಿನೂತನವಾಗಿ ಪ್ರತಿಭಟನೆ ಮಾಡುವ ಮೂಲಕ ಗಮನ ಸೆಳೆಯಿತು.

ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಅಲ್ಲೇ ಒಲೆ ಉರಿಸಿ, ಹಾಲು ಕುದಿಸಿ ಚಹಾ ಮಾಡಿ ಕುಡಿಯುವ ಮೂಲಕ ಅಡುಗೆ ಅನಿಲ ದರ ಏರಿಕೆಯನ್ನು ವಿರೋಧಿಸಿದರು.

ಪ್ರತಿಭಟನೆಗೆ ಚಾಲನೆ ನೀಡಿ ಮಾತನಾಡಿದ ದ.ಕ. ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅಡುಗೆ ಅನಿಲ ದರ ಏರಿಸುವ ಮೂಲಕ ಮಹಿಳೆಯರು ಕಣ್ಣೀರು ಸುರಿಸುವಂತೆ ಮಾಡಿದೆ. ಇದು ಖಂಡನೀಯ ಎಂದರು.

ಪ್ರತಿಭಟನೆಯ ನೇತೃತ್ವವನ್ನು ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಶಾಲಿಟ್ ಪಿಂಟೊ, ಪಕ್ಷದ ಮುಖಂಡರಾಗಿರುವ ಮಾಜಿ ಮೇಯರ್‌ಗಳಾದ ಹಿಲ್ಡಾ ಆಳ್ವ, ಜೆಸಿಂತಾ ಡಿಸೋಜ ಮತ್ತಿತರರು ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News